ಲೇಕ್ 2024: 14ನೇ ದ್ವೈವಾರ್ಷಿಕ ಕೆರೆ ಸಮ್ಮೇಳನದ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: ‘ಲೇಕ್ 2024’ ಸಮ್ಮೇಳನವು ಪ್ರಸ್ತುತ ಜ್ವಲಂತ ಸಮಸ್ಯೆಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳುವ ಸುಸ್ಥಿರ ಹಾಗೂ ಸದುದ್ದೇಶಗಳನ್ನು ಹೊಂದಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ‘ಲೇಕ್2024- 14ನೇ ದ್ವೈವಾರ್ಷಿಕ ಕೆರೆ (ಸರೋವರ) ಸಮ್ಮೇಳನ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ. […]

ಉಡುಪಿ: ನೇರ ಸಂದರ್ಶನ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳುತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿಸಂಖ್ಯೆ: 8105618291, 9945856670, 8105774936 […]

ಉಡುಪಿ: ಬಸ್ ಏಜೆಂಟ್ ಆತ್ಮಹತ್ಯೆಗೆ ಶರಣು

ಉಡುಪಿ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಮಧ್ವನಗರ ಮೂಡಬೆಟ್ಟು ನಿವಾಸಿ ಸುಮನೇಶ್ ಹೆಗ್ಡೆ (42) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನದಿಯಲ್ಲಿ ತೇಲಿ ಬರುತ್ತಿದ್ದ ಶವವನ್ನು ಗಮನಿಸಿದ ಮಾಜಿ ನಗರಸಭೆ ಸದಸ್ಯ ಚಿನ್ಮಯಮೂರ್ತಿ ಮತ್ತು ಅವರ ತಂಡವು ಶವವನ್ನು ದಡಕ್ಕೆ […]

ಉಡುಪಿ:ಬಿ.ಇಡಿ ಕೋರ್ಸಿಗೆ ದಾಖಲಾತಿ ಆರಂಭ: ಅರ್ಜಿ ಆಹ್ವಾನ

ಉಡುಪಿ : ಪ್ರಸಕ್ತ ಸಾಲಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನವೆಂಬರ್ 14 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್ www.schooleducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿನೋಡಲ್ ಕೇಂದ್ರದ ವಿವರ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಆನ್‌ಲೈನ್ ಅರ್ಜಿಯನ್ನು […]

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ […]