ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಘಾತದಿಂದ ನಿಧನ.

ಬಂಟ್ವಾಳ: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಅ.21ರಂದು) ಹೃದಯಘಾತದಿಂದ ನಿಧನರಾದರು. ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. 1957ರಲ್ಲಿ ಜನಿಸಿದ್ದ ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ […]