ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ
ಮಂಗಳೂರು: ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಅಕ್ಟೋಬರ್ 13ರಂದು ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್, ಇವರಿಗೆ ನೀಡಿ ಗೌರವಿಸಿತು. 35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ […]
ಗಣೇಶ್ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಘಟಕ ಅದ್ದೂರಿಯಾಗಿ ಲೋಕಾರ್ಪಣೆ.
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವ ಪಡೆದಿದ್ದಾರೆ. […]
ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ
ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಉಡುಪಿ: ಚೂರಿಯಿಂದ ಇರಿದು ಸ್ನೇಹಿತನ ಕೊಲೆ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ 32 ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ […]
ಮೂಡುಬಿದಿರೆ:ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ
ಮೂಡುಬಿದಿರೆ: ‘ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ […]