ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಡುಪಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚನ್ನಪಟ್ಟಣಕ್ಕೆ ಇಂದು (ಅ.23) ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಉಳಿದಂತೆ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಮಗಳಾದ ವೈಶಾಲಿ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ಈ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಕಾಂಗ್ರೆಸ್ ಮಣೆಹಾಕಿದೆ.

ಕಾಪು: ಮನೆಯ ಹಂಚಿನ ನಡುವೆ ಅಡಗಿ ಕುಳಿತ ಹೆಬ್ಬಾವು

ಉಡುಪಿ: ಮನೆಯ ಹಂಚಿನ ನಡುವೆ ಅಡಗಿ ಕುಳಿತ ಹೆಬ್ಬಾವನ್ನು ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಲಾಗಿದೆ. ಕಾಪು ತಾಲೂಕಿನ ಕರಂದಾಡಿಯ ಭಾಸ್ಕರ ಪೂಜಾರಿ ಎಂಬವರ ಮನೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಅದನ್ನ ಇಳಿಸಲು ಸಾಧ್ಯವಾಗಿಲ್ಲ. ಬಳಿಕ ಹಾವನ್ನು ರಕ್ಷಿಸುವ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ ಪೂಜಾರಿ ಅವರನ್ನು ಕರೆಸಲಾಯಿತು. ಅವರು ಹಂಚಿನಡಿಯಲ್ಲಿ ಅವಿತು ಕುಳಿತಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ ಮಾರಾಟವನ್ನು ಇದೇ ನ. 27ರಂದು ಬೆಳಿಗ್ಗೆ 8.30ರಿಂದ 12.30ರ ವರೆಗೆ ಕೊಡವೂರು ತೋಟದಮನೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್ ತಿಳಿಸಿದರು. […]

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024”

ಉಡುಪಿ: ಕೆನಾರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಹಿಂಭಾಗದ ರಿಟೇಲ್ ಅಸೆಟ್ ಹಬ್ ನಲ್ಲಿ “ಕೆನರಾ ರಿಟೈಲ್ ಮೇಳ-2024” ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನ ಉಡುಪಿ ಪ್ರಾದೇಶಿಕ ವಲಯದ ಮ್ಯಾನೇಜರ್ ಕೌಶಿಕ್ ರೆಡ್ಡಿ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೇಳದಲ್ಲಿ ಹೂಂಡೈ, ಹೊಂಡಾ, ಟೊಯೋಟಾ, ನೆಕ್ಸಾ ಮೊದಲಾದ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿವೆ. […]

ಮಂಗಳೂರು: ಸಮುದ್ರ ಕಿನಾರೆಯಲ್ಲಿ ಆಡುತ್ತಿದ್ದ ಯುವಕ ನೀರುಪಾಲು.

ಮಂಗಳೂರು: ಸುರತ್ಕಲ್ ನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸೋಮಯಾಜಿ ಟೆಕ್ಸ್ ಟೈಲ್ ಮಾಲಕನ ಪುತ್ರ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ನೀರು ಪಾಲಾಗಿದ್ದು, […]