ಉಡುಪಿ:ಅ. 26-27 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮೇಳ ಕಾರ್ಯಕ್ರಮ
![](https://udupixpress.com/wp-content/uploads/2024/10/1000032952-1024x576.webp)
ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) […]
ಉಡುಪಿ:ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
![](https://udupixpress.com/wp-content/uploads/2024/10/1000032959.jpg)
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ “ಚೈನ್” ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದಲ್ಲಿ ಮೊದಲನೇ ದಿನದ ತರಬೇತಿ ಕಾರ್ಯಾಗಾರವು ಮಂಗಳವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ […]
ಉಡುಪಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
![](https://udupixpress.com/wp-content/uploads/2024/10/1000032960.jpg)
ಉಡುಪಿ: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡುತ್ತಿದ್ದರು. ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು […]
ಹೊಸದಿಲ್ಲಿ: ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ
![](https://udupixpress.com/wp-content/uploads/2024/10/IMG_20241023_095901.jpg)
ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ‘ಡಾನಾ’ ಚಂಡಮಾರುತವು ಮುಂದಿನ 48 ಗಂಟೆಗಳಲ್ಲಿ ಅಂದರೆ ಗುರುವಾರ ರಾತ್ರಿ (ಅ.24) ಹಾಗೂ ಶುಕ್ರವಾರ (ಅ.25) ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ಸಾಗರ ದ್ವೀಪ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ‘ಡಾನಾ’ ಚಂಡಮಾರುತ ಪ್ರಭಾವದಿಂದ ಬಿರುಗಾಳಿ ಸಹಿತ ದೇಶದ ಈ ವಿವಿಧ ರಾಜ್ಯಗಳಿಗೆ ಭರ್ಜರಿ ಮಳೆ ಆಗಲಿದೆ. ಪ್ರತಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮುಂದಿನ […]
ಸುರತ್ಕಲ್: ಲಾರಿ-ದ್ವಿಚಕ್ರ ವಾಹನ ನಡುವೆ ಅಪಘಾತ; ಸವಾರ ಮೃತ್ಯು.
![](https://udupixpress.com/wp-content/uploads/2024/03/accident.png)
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸೂರಜ್ ಇಂಟರ್ ನ್ಯಾಷನಲ್ ಬಳಿ ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಮುಕ್ಕ ಯೂನಿಯನ್ ಬ್ಯಾಂಕ್ ಸಿಬ್ಬಂದಿ, ಮುಕ್ಕ ಚೆಕ್ ಪೋಸ್ಟ್ ಬಳಿಯ ನಿವಾಸಿ ರವಿ ಎಂದು ತಿಳಿದು ಬಂದಿದೆ. ರವಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತ್ನಿಯನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.