ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ; 13 ಮಂದಿ ಆರೋಪಿಗಳ ಸೆರೆ
ಉಡುಪಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು 13 ಮಂದಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ […]
ಬ್ರಹ್ಮಾವರ: ಅ. 26, 27ಕ್ಕೆ ‘ಕೃಷಿ ಮೇಳ-2024’
ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ […]
ಡಿಸ್ಟ್ರಿಬ್ಯೂಟರ್ ಬೇಕಾಗಿದ್ದಾರೆ BHATKAL & KOLLUR
ನೀರಿನ ಬಾಟಲಿ ಹಾಗು ಕ್ಯಾನ್ ಗಳ ಉತ್ಪಾದಕರಾದ ಅಕ್ವಾಜಾಲ್ (Udaya Industries) ಕಂಪನಿಯ ಉತ್ಪಾದಕಗಳನ್ನು ಭಾಟ್ಕಳದಲ್ಲಿ ಹಂಚಲು ಇಚ್ಛಿಸುವವರು ಈ ಕೂಡಲೇ ಸಂಪರ್ಕಿಸಿ: 9731621800
ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ. ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ
ಮಂಗಳೂರು: ಕರಾವಳಿಯಲ್ಲಿ ಕೋಣಗಳ ಓಟದ ಅಬ್ಬರ ಶುರುವಾಗಲಿದೆ. ದಕ್ಷಿಣ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನೊಳಗೊಂಡ ಜಿಲ್ಲಾ ಕಂಬಳ ಸಮಿತಿ ಈ ಬಾರಿಯ ಕಂಬಳದ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಕಂಬಳವು ನವಂಬರ್ ಒಂಬತ್ತರಂದು ಪನಿಪಿಲ್ಲಾದಲ್ಲಿ ಅರಂಭಗೊಳ್ಳಲಿದೆ.
ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ ಗೆಲುವು
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಜನಪ್ರತಿನಿಧಿಗಳ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ (ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ನ ರಾಜು ಪೂಜಾರಿ ಅವರಿಗಿಂತ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇನ್ನು ಅಧಿಕೃತ ಘೋಷಣೆ ಮಾತ್ರ ಬಾಕಿ […]