ಅ.29ರಂದು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಬೃಹತ್ ಪ್ರತಿಭಟನೆ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ಇದೇ ಅ. 29ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ಸಂಚಾಲಕ ಅಮೃತ್ ಶೆಣೈ ಹೇಳಿದರು. ಉಡುಪಿಯ ಡಯಾನ ಹೊಟೇಲಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದ್ರಾಳಿ ಸೇತುವೆ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಅಪಘಾತಗಳು ಸಂಭವಿಸಿದ್ದು, ಕೆಲವು ಮಂದಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಪ್ರತಿದಿನ ಟ್ರಾಫಿಕ್ ಜಾಮ್ ನಿಂದಾಗಿ ಗಂಟೆ […]

ಉಡುಪಿ: ಅ.28ರಂದು ಅಂಗವಿಕಲರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಅಂಗವಿಕಲರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇದೇ ಅ. 28ರಂದು 9.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ದಿವ್ಯಾಂಗರ ರಕ್ಷಣಾ ವೇದಿಕೆಯ ಸಂಚಾಲಕ ವಿಜಯ ಕೊಡವೂರು ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮಣಿಪಾಲ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಲ್ನಾಡಿಗೆ ಜಾಥ ನಡೆಯಲಿದೆ. ಬಳಿಕ […]

ಡಿ. 1ರಂದು ಮಲ್ಪೆಯಲ್ಲಿ ‘ಉಡುಪಿ ಮ್ಯಾರಥಾನ್-2024’

ಉಡುಪಿ: ಲೊಂಬಾರ್ಡ್ ಆಸ್ಪತ್ರೆಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ಸ್ ಕ್ಲಬ್‌ನ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಲೊಂಬಾರ್ಡ್ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡುವ ಧೈಯದೊಂದಿಗೆ “ಉಡುಪಿ ಮ್ಯಾರಥಾನ್-2024” ನ್ನು ಡಿಸೆಂಬರ್ 1ರಂದು ಮಲ್ಪೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತ್ತನ್ನ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಗೆ ವಿವಿಧ ರಾಜ್ಯಗಳಿಂದ ಅಂದಾಜು 1500ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಮ್ಯಾರಥಾನ್ ಬೆಳಿಗ್ಗೆ 5 ಗಂಟೆಗೆ […]

ಉಡುಪಿ: ಅ.28ರಂದು ಪಂಡಿತ್ ರಾಜನ್ ಮಿಶ್ರಾಜೀ ಸ್ಮರಣಾರ್ಥ “ಸಂಗೀತ ಕಾರ್ಯಕ್ರಮ”

ಉಡುಪಿ: ಸಂಗೀತ ಸಭಾದ ವತಿಯಿಂದ ಪದ್ಮ ಭೂಷಣ ಪುರಸ್ಕೃತ ಪಂಡಿತ್ ರಾಜನ್ ಮಿಶ್ರಾಜೀ ಅವರ ಸ್ಮರಣೆಯ ಅಂಗವಾಗಿ ಇದೇ ಅಕ್ಟೋಬರ್ 28ರಂದು ಸಂಜೆ 5.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಗೀತಾ ಸಭಾದ ಅಧ್ಯಕ್ಷ ರಂಗ ಪೈ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಗೀತ ಸಭಾ ಕಳೆದ 60 ವರ್ಷಗಳಿಂದ ಹತ್ತು ಹಲವಾರು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಜನಮನ್ನಣೆಗೆ ಪಾತ್ರವಾಗಿದೆ ಎಂದರು. ಈ ಸಂಗೀತ ಕಾರ್ಯಕ್ರಮದಲ್ಲಿ […]

ಉಡುಪಿ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿರುವುದನ್ನು ಖಂಡಿಸಿ ರೈತರಿಂದ ಪ್ರತಿಭಟನೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಸಾವಿರ ರೂ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ರೈತರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಅವರು, ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಬಹಳ ಸಂಕಷ್ಟಕರ ಪರಿಸ್ಥಿತಿ ಎದುರಿಸಿದ್ದಾರೆ. ಎಲ್ಲ ರೈತರಿಗೆ ನಷ್ಟವಾಗಿದೆ. ಈಗ ಮಾರುಕಟ್ಟೆ ದರ, ಬೆಳೆ […]