ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

ಉಡುಪಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಲಯನ್ಸ್, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ನ.9ರಂದು ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ “ನನ್ನ ನಾಡು ನನ್ನ ಹಾಡು” ಎಂಬ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಕೆಮ್ಮಣ್ಣು ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯನ್ನು ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ 3182 ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ […]
ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬದಲು ಜನರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲಿ- ಯಶ್ ಪಾಲ್ ಸುವರ್ಣ ತಿರುಗೇಟು

ಉಡುಪಿ : ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ.ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಪ್ರತಿಭಟನೆ ನಡೆಸುವುದು ಕೇವಲ ಪ್ರಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿಯ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇವತ್ತು ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ವಿಳಂಬ ಕುರಿತು ಪ್ರತಿಭಟನೆ […]
ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ

ಉದ್ಯಾವರ : ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಾಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು. 40ಕ್ಕೂ ಅಧಿಕ ವರ್ಷ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಯಾಗಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಇವರು, ಎರಡು ಬಾರಿ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ಕೆಎಫ್’ಡಿಸಿ ಸದಸ್ಯರಾಗಿಯೂ, 1995 -98 ಅವರಿಗೆ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿಯೂ ಜನಮನ್ನಣೆ ಗಳಿಸಿದ್ದರು. ಅತ್ಯಂತ ಸರಳ […]
ಕುಂದಾಪುರ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ (ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆಯಲ್ಲಿ ನೀರುಪಾಲಾಗಿದ್ದ ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕ. ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ […]
ಮುಂಗಾರು ಮಳೆಯಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಶೇ. 15 ರಷ್ಟು ಹೆಚ್ಚು ಮಳೆಯಾಗಿ, ರಸ್ತೆ, ಸೇತುವೆ, ವಿದ್ಯುತ್ […]