ಬೈಂದೂರು: ಸಿಮೆಂಟ್ ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ಮೃತ್ಯು.
ಬೈಂದೂರು: ತಾಲೂಕಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಝಾರ್ಖಂಡ್ ಮೂಲದ ಚಾಲಕ ದಾಮೋದರ ಯಾದವ್ (55) ಎಂದು ಗುರುತಿಸಲಾಗಿದೆ. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ದೀಪಾವಳಿಯ ಪ್ರಯುಕ್ತ ಬೆಂಗಳೂರು-ಕಾರವಾರ ವಿಶೇಷ ರೈಲು ಸಂಚಾರ..!
ಉಡುಪಿ: ಪ್ರಯಾಣಿಕರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಪ್ರಯುಕ್ತ ಅ.30ರಂದು ಬೆಂಗಳೂರು-ಕಾರವಾರ ವಿಶೇಷ ರೈಲು ಸಂಚಾರವನ್ನು ಈಗಾಗಲೇ ಘೋಷಿಸಿದ್ದ ಕೊಂಕಣ ರೈಲ್ವೇ ಇದೀಗ ನ.3ರಂದು ಇನ್ನೊಂದು ವಿಶೇಷ ರೈಲು ಬಿಡಲಿದೆ. ನ.3ರಂದು ಕಾರವಾರದಿಂದ ರೈಲು (01686)ಮಧ್ಯಾಹ್ನ 12ಕ್ಕೆ ಹೊರಟು ಮಾರನೆ ದಿನ ಬೆಳಗ್ಗೆ 4ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲಿಗೆ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ,ಮೂಕಾಂಬಿಕಾ (ಬೈಂದೂರು), ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, […]
ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ
ಕಾರ್ಕಳ,ಅ.30: ಇಂತಹ ಸ್ಪರ್ಧೆಗಳನ್ನ ಆಯೋಜನೆ ಮಾಡುವುದರಿಂದ ಪ್ರತಿಭೆಗಳು ಅನಾವರಣಗೊಳ್ಳಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮಹಾಗಣಪತಿ ಸೌಹಾರ್ದ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್ ರೈ ಹೇಳಿದರು. ಅವರು ಕಾರ್ಕಳ ಮೈ-ಟೆಕ್ ಐಟಿಐ ಕಾಲೇಜಿನಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುವ ವಾಯ್ಸ್ ಆಪ್ ಚಾಣಕ್ಯ -2024 ರಾಜ್ಯ ಮಟ್ಟದ ಸಂಗೀತ […]