ಕುಂದಾಪುರ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ ದಾಳಿ; ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ‌ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ಇಂದು ನಡೆದಿದೆ. ಗುಲ್ವಾಡಿ ಗ್ರಾಮದ ಉದಯನಗರ ನಿವಾಸಿಗಳಾದ ನಜರುಲ್ಲಾ ಖಾನ್‌ (40) ಹಾಗೂ ಫಾತಿಮಾ(33) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ 6.43 ಲಕ್ಷ ಮೌಲ್ಯದ […]

ಉಡುಪಿ: ಕನ್ನಡ ರಾಜ್ಯೋತ್ಸವ ಸಂಭ್ರಮ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಕಾಯ೯ಕ್ರಮ ಎಂ.ಜಿ.ಎಂ ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ನ.1 ರಂದು ನಡೆಯಿತು. ಈ ಸಂದಭ೯ದಲ್ಲಿ ಎಲ್ಲಾ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.ಕನ್ನಡ ಧ್ವಜ ಹಸ್ತಾಂತರಿಸಿ ಮಾತನಾಡಿದ, ಕಸಾಪ ಜಿಲ್ಲಾ ಕಾಯ೯ಕಾರಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ, ರಾಜ್ಯೋತ್ಸವ ನಾಡಿನ ಶ್ರೇಷ್ಠ ಹಬ್ಬವಾಗಿದೆ. ನಮ್ಮ ನಾಡು ನುಡಿ ಸಂಸ್ಕೃತಿಗಾಗಿ ನಾವೆಲ್ಲರೂ ಕಟಿಬದ್ಧರಾಗಿ ಕಾಯ೯ ನಿವ೯ಹಿಸಬೇಕು ಈ ನಿಟ್ಟಿನಲ್ಲಿ ಕಸಾಪದ […]

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ.

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಒಬ್ಬರು ಮನೆಯಿಂದ ನಾಪತ್ತೆ ಯಾಗಿರುವ ಘಟನೆ ಬೋಳಾರದಲ್ಲಿ ನಡೆದಿದೆ. ಬೋಳಾರ ಎಮ್ಮೆಕೆರೆಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಾಗಿದ್ದ ಮೆಹರ್‌ ಬಾನು (18). ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದು, ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದರು. ಅ. 24ರಂದು ಸಂಜೆ 4 ಗಂಟೆಗೆ ತಾಯಿ ಹೊರಗೆ ಹೋಗಿದ್ದು, 6 ಗಂಟೆಗೆ ವಾಪಸು ಬಂದು ನೋಡಿದಾಗ ಮಗಳು ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಎಲ್ಲ ಕಡೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿಲ್ಲ. ಪಾಂಡೇಶ್ವರ ಠಾಣೆಯಲ್ಲಿ […]

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ನೇಮಕ

ಉಡುಪಿ: ಕಳೆದ ಒಂದೂವರೆ ವರ್ಷದಿಂದ ಖಾಲಿ ಇದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕಡೆಗೂ ಹೊಸ ಸಾರಥಿಯ ನೇಮಕವಾಗಿದೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿನಕರ್ ಹೇರೂರು ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಇತರ ಸದಸ್ಯರಾಗಿ ಜ್ಯೋತಿ ಹೆಬ್ಬಾರ್ ಉಡುಪಿ, ಸತೀಶ್ ಕುಮಾರ್ ಉಡುಪಿ, ಡೇನಿ ವಿಲಯಂ ಲಾರೆನ್ಸ್ ಪಿಂಟೊ, ದಿಲೀಪ್ ಹೆಗ್ಡೆ ಹಾಗೂ ಗಿರೀಶ್ ಕುಮಾರ್ ಉದ್ಯಾವರ ಅವರನ್ನು ಸರಕಾರ ನೇಮಿಸಿದೆ.

ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. […]