ಕಾಪು: ಟ್ಯಾಂಕರ್-ಬೈಕ್‌ ನಡುವೆ ಭೀಕರ ಅಪಘಾತ: ಸವಾರ ಮೃತ್ಯು.

ಉಡುಪಿ: ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ; ಹಲವು ಮಂದಿಗೆ ಗಾಯ

ಉಡುಪಿ: ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್‌ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದೆ. ಸ್ಥಳಕ್ಕೆ ಕಾಪು […]

ಶಬರಿಮಲೆ ಯಾತ್ರಾರ್ಥಿಗಳಿಗೆ ಐದು ಲಕ್ಷ ರೂಪಾಯಿಗಳ ಉಚಿತ ವಿಮಾ ರಕ್ಷಣೆ.

ಕೊಟ್ಟಾಯಂ: ಈ ವರ್ಷ ಶಬರಿಮಲೆ ಯಾತ್ರೆಯ ಅವಧಿಯಲ್ಲಿ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಐದು ಲಕ್ಷ ರೂಪಾಯಿಗಳ ಉಚಿತ ವಿಮಾ ರಕ್ಷಣೆಯನ್ನು ಪಡೆಯಲಿದ್ದಾರೆ. ಶಬರಿಮಲೆಗೆ ಯಾತ್ರೆ ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿದ್ದು, ದೇವಸ್ಥಾನಕ್ಕೆ ಬರುವ ಎಲ್ಲಾ ಯಾತ್ರಾರ್ಥಿಗಳಿಗೆ ದೇಗುಲವನ್ನು ನಿರ್ವಹಿಸುವ ಅಪೆಕ್ಸ್ ದೇವಸ್ಥಾನದ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ವಿಮಾ ಸೌಲಭ್ಯವನ್ನು ಒದಗಿಸಲಿದೆ ಎಂದು ರಾಜ್ಯ ದೇವಸ್ವಂ ಸಚಿವ ವಿ.ಎನ್. ವಾಸವನ್ ಹೇಳಿದ್ದಾರೆ. ಎಲ್ಲಾ ಯಾತ್ರಾರ್ಥಿಗಳಿಗೆ ಸುಗಮ ದರ್ಶನವಾಗಲು ಬೆಟ್ಟದ ದೇಗುಲದಲ್ಲಿ ವ್ಯವಸ್ಥೆಗಳನ್ನು ಪೂರ್ಣಗೊಳಿಸಲಾಗಿದೆ. ಐದು […]