ಕಟಪಾಡಿ:ತ್ರಿಶಾ ಸಂಸ್ಥೆ ಅಟಲ್ ಇನ್‌ಕ್ಯೂಬೇಶನ್ ಸೆಂಟರ್, ನಿಟ್ಟೆ ಯೊಂದಿಗೆ ಒಡಂಬಡಿಕೆ
ಕಟಪಾಡಿ:ವಿದ್ಯಾರ್ಥಿಗಳಿಗೆ ಈಗಿನಿಂದಲೇ ವಾಣಿಜ್ಯೋದ್ಯಮದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತ್ರಿಶಾ ಸಂಸ್ಥೆ ಅಟಲ್ ಇನ್‌ಕ್ಯೂಬೇಶನ್ ಸೆಂಟರ್, ನಿಟ್ಟೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಈ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನವೆಂಬರ್ 4 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಟಲ್ ಇನ್‌ಕ್ಯೂಬೇಶನ್ ಸೆಂಟರ್ (ಎಐಸಿ) ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರಾದ ಡಾ. ಎ ಪಿ ಆಚಾರ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಹೊಸ ಹೊಸ ಆಲೋಚನೆಯೊಂದಿಗೆ ಉದ್ಯಮಿಯಾಗುವ ಕನಸಿದ್ದವರಿಗೆ ಬೇಡಿಕೆ ಹೆಚ್ಚಿದೆ ಎಂದರು. […]
ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು
ಉಪ್ಪಿನಂಗಡಿ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟ ಯುವತಿ. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಳು.
ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ; ಶಾಸಕ ಸುನೀಲ್ ಕುಮಾರ್
ಉಡುಪಿ: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ಕಂದಾಯ ಹಾಗೂ ವಕ್ಫ್ ಇಲಾಖೆ […]
ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ‘ಲ್ಯಾಂಡ್ ಜಿಹಾದ್’ ಷಡ್ಯಂತ್ರ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಮುಡಾ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಮೀರ್ ಅಹ್ಮದ್ ಗೆ ಕುಮ್ಮಕ್ಕು ನೀಡಿ ವಕ್ಫ್ ಬೋರ್ಡ್ ಮೂಲಕ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ರಚಿಸಿ ರಾಜ್ಯದ ಜನತೆಯನ್ನು ರೊಚ್ಚಿಗೆಬ್ಬಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಗರಣಗಳ ಸರಮಾಲೆಯಿಂದ ರಾಜ್ಯದ ಆರ್ಥಿಕತೆಯು ಸಂಪೂರ್ಣ ಹಳಿತಪ್ಪಿ ದಿವಾಳಿತನದ ಅಂಚಿಗೆ ತಲುಪಿದ್ದರೂ, ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು […]
ಮಂಗಳೂರು:ತ್ರಿಶಾ ಕ್ಲಾಸಸ್ : ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ
ಮಂಗಳೂರು:ಕರಾವಳಿ ಭಾಗದಲ್ಲಿ ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ನವೆಂಬರ್ 6 ರಂದು ಅಪರಾಹ್ನ 2 ಗಂಟೆಗೆ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಮಂಗಳೂರಿನಲ್ಲಿ ನಡೆಯಲಿದೆ. ತರಗತಿಯ ವಿಶೇಷತೆಗಳು : ಆಸಕ್ತರು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ , ವಿದ್ಯಾರ್ಥಿ ಗ್ರಾಮ, ಗಣೇಶ್ ಬಾಗ್ ಲೇಔಟ್, ಕೊಟ್ಟಾರ, ಮಂಗಳೂರಿಗೆ ಭೇಟಿ ನೀಡಬಹುದು ಎಂದು […]