ಮಣಿಪಾಲ: ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್‌(22) ಕಿಶನ್‌(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ […]

ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರು ಬಿಜೆಪಿ ಮಂಡಲದಿಂದ ಧರಣಿ

ಉಡುಪಿ: ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೈಂದೂರು ತಾಲೂಕು ಆಡಳಿತ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ನ ಅನಧಿಕೃತ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕಾನೂನು ಕುರಿತು ಕಳೆದ ಒಂದು ವರ್ಷದಿಂದ ವಿಮರ್ಶೆ […]

ಹೆಜಮಾಡಿ: ಕುಡಿದ ಮತ್ತಿನಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ

ಉಡುಪಿ: ಕುಡಿದ ಮತ್ತಿನಲ್ಲಿ ಅತೀ‌ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ. ಕೇರಳ ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಮೊದಲು ಪಾಂಗಾಳ ಸಮೀಪ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಲ್ಲಿ ಕಾರು ನಿಲ್ಲಿಸದೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಕಂಬವೊಂದಕ್ಕೆ ಗುದ್ದಿದ್ದಾರೆ. ಬಳಿಕ ಪೊಲೀಸರು […]

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿನ ಸಜೆ ನೀಡಿದೆ. 17ರ ಹರೆಯದ ನೊಂದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿದ ಮಿಥುನ್‌ (21) ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿತ್ತು. ಆಕೆಯ ತಂದೆ ನೀಡಿದ್ದ ದೂರಿನ ಮೇಲೆ ಕುಂದಾಪುರ ಇನ್‌ಸ್ಪೆಕ್ಟರ್‌ ನಂದಕುಮಾರ್‌ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ […]

ಕಾರ್ಕಳ: ತಾಯಿಯಿಂದ ಬೇರ್ಪಟ್ಟ ಚಿರತೆ ಮರಿಯ ರಕ್ಷಣೆ

ಉಡುಪಿಯ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಚಿರತೆಯ ಮರಿಯೊಂದು ಕಾಣಿಸಿಕೊಂಡಿದೆ. ಇಲ್ಲಿನ ಕಲ್ಯ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪ ಚಿರತೆಯ ಮರಿ ಅವಿತು ಕುಳಿತಿತ್ತು. ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿದ್ದ ಈ ಪುಟ್ಟ ಮರಿಯನ್ನು ಮೊದಲು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಪುಟ್ಟ ಚರಿತ್ರೆ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.