ಉಡುಪಿ ಬೈಲಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ

ಉಡುಪಿ: ಉಡುಪಿ ಬೈಲಕೆರೆಯ ವಿದ್ಯೋದಯ ಶಾಲೆಯ ಬಳಿಯ ಇಂದ್ರಾಣಿ ತೋಡಿನಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂದು ಶಂಕಿಸಲಾಗಿದೆ. ಮೃತನ ಹೆಸರು, ವಿಳಾಸ‌ ತಿಳಿದುಬಂದಿಲ್ಲ. ವಾರಸುದಾರರು ನಗರ‌ ಪೋಲಿಸ್ ಠಾಣೆಯನ್ನು‌ ಸಂಪರ್ಕಿಸಲು‌ ಸೂಚಿಸಲಾಗಿದೆ.ಸ್ಥಳಿಯರಾದ ಸುನಿಲ್ ಬೈಲಕೆರೆ ಅವರು ಶವ ಕಂಡು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಘಟನಾ ಸ್ಥಳಕ್ಕೆ ಬಂದ ಒಳಕಾಡು ಅವರು, ತೋಡಿನಲ್ಲಿದ್ದ ಕೊಳೆತ ಶವವನ್ನು ಮೇಲಕ್ಕೆತ್ತಿದ್ದರು. ನಗರ‌ ಪೋಲಿಸ್ ಠಾಣೆಯ […]

ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಉತ್ತಮ ಜೀವನ ಸಾಧ್ಯ: ಯಶ್‌ಪಾಲ್ ಸುವರ್ಣ

ಉಡುಪಿ: ಇಂದು ವಿದ್ಯಾರ್ಥಿನಿಯರಿಗೆ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವಕಾಶಗಳು ಇದ್ದು, ಅದನ್ನು ಬಳಸಿಕೊಂಡು ಉತ್ತಮ ಜೀವನವನ್ನು ನಡೆಸಲು ವಿದ್ಯಾರ್ಥಿಗಳಲ್ಲಿ ಆಸಕ್ತಿ, ಆತ್ಮವಿಶ್ವಾಸ ಮತ್ತು ನಂಬಿಕೆಯನ್ನು ಇಟ್ಟುಕೊಂಡು ಮಾಡುವ ಯಾವುದೇ ಕೆಲಸವನ್ನು ಶೃದ್ಧೆಯಿಂದ ಮಾಡಿದರೆ ಉತ್ತಮ ಫಲಿತಾಂಶ ಖಂಡಿತ ತಮ್ಮ ನಿರೀಕ್ಷೆಯಂತೆ ಇರುತ್ತದೆ ಎಂದು ಉಡುಪಿಯ ಮಾನ್ಯ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಇವರು ಅಭಿಪ್ರಾಯಪಟ್ಟರು. ಇವರು ನಗರದ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಪುರಭವನ ಅಜ್ಜರಕಾಡು ಇಲ್ಲಿ […]

ಬಂಟ್ವಾಳ: ಆಟವಾಡುತ್ತಿದ್ದ ವೇಳೆ ವಾಹನದಡಿ ಸಿಲುಕಿ ಮಗು ಮೃತ್ಯು.

ಬಂಟ್ವಾಳ: ತಾಲೂಕಿನ ಲೊರೆಟ್ಟೊಪದವಿನಲ್ಲಿ ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಮೃತ್ಯು. ಆಶೀಕಾ ಅವಳ ಅಜ್ಜಿ ಮನೆಯಾದ ಬಂಟ್ವಾಳದ ಲೊರೊಟ್ಟೋ ಪದವು ಸಮೀಪದ ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದೆ. ಮಗುವನ್ನು ಆಸ್ಪತ್ರೆಗೆ […]

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ (National overseas scholarship), IIT, IIIT,NIT, IIM, IISER, AIIMS, NLU, INI & IUSLA ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 […]

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ

ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಅಂಗವಾಗಿ ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿತು. ಮುಖ್ಯ ಶಾಖಾ ಗ್ರಂಥಾಲಯದ ಸ್ಫರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಕ್ಕಳಿಗೆ ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಇಂತಹ ಚಟುವಟಿಕೆಗಳನ್ನು ಏರ್ಪಡಿಸಿರುವುದು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತು ಆಸಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದರು. ಸಾಹಿತಿ ಹಾಗೂ ಶಾರದ ಪದವಿ […]