ಬ್ರಹ್ಮಾವರ: ಯುವಕ ನಾಪತ್ತೆ
ಉಡುಪಿ: ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಹೇರೂರು ಗ್ರಾಮದ ರೈಲ್ವೆ ಗೇಟ್ ಹತ್ತಿರ ನಿವಾಸಿ ಕೊರಗಯ್ಯ ಎಂಬವರ ಮಗ ಚೇತನ್ (26) ಎಂಬವರು ನ.5ರಂದು ರಾತ್ರಿ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ.
ಮಂಗಳೂರು: ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಹಾಗೂ ಜೀವಾವಧಿ […]
ಮಣಿಪಾಲ: ಮುನಿಯಾಲು ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ ‘ಎ’ ಗ್ರೇಡ್
ನವದೆಹಲಿಯ ಭಾರತೀಯ ಚಿಕಿತ್ಸಾ ಪದ್ಧತಿ ರಾಷ್ಟ್ರೀಯ ಆಯೋಗ (ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಂ ಆಫ್ ಮೆಡಿಸಿನ್) ನಡೆಸಿದ ಭಾರತೀಯ ಗುಣಮಟ್ಟ ಪರಿಷತ್ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ) ಮೌಲ್ಯಾಂಕನದಲ್ಲಿ ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜು ರಾಷ್ಟ್ರ ಮಟ್ಟದಲ್ಲಿ `ಎ’ ಗ್ರೇಡ್ ಪಡೆದಿದೆ. ಈ ಮೌಲ್ಯಾಂಕನ ಶೈಕ್ಷಣಿಕ ಗುಣಮಟ್ಟ, ಶಿಕ್ಷಕರ ಕ್ಷಮತೆ, ವಿದ್ಯಾರ್ಥಿಗಳ ಕಾರ್ಯಕ್ಷಮತೆ, ಸಂಶೋಧನೆ ಹಾಗೂ ಉತ್ಕೃಷ್ಟ ಗ್ರಂಥ ಪ್ರಕಟಣೆ ಮತ್ತು ಅಳವಡಿಸಿಕೊಂಡ ನೂತನ ಕಲಿಕಾ ವಿಧಾನಗಳು ಮೊದಲಾದ ಮಾನದಂಡಗಳ ಆಧಾರದ ಮೇಲೆ ನೀಡಲಾಗುತ್ತದೆ. ಜೀವಿಗಳನ್ನು […]
ಉಡುಪಿ: ರೈಲ್ವೆ ಸೇತುವೆ ಕಾಮಗಾರಿ ವೇಳೆ ತಲೆಕೆಳಗಾಗಿ ಬಿದ್ದ ಕ್ರೈನ್; ತಪ್ಪಿದ ಭಾರಿ ದುರಂತ.!
ಉಡುಪಿ: ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ. ಎಡಮಗ್ಗಲಿನ ಎತ್ತರದ ರಸ್ತೆಯಿಂದ ಬಲ ಮಗ್ಗುಲಿನಲ್ಲಿರುವ ತಗ್ಗು ರಸ್ತೆಗೆ, ಈ ಕ್ರೈನ್ ಬಿದ್ದಿದ್ದರೆ ಭಾರಿ ಅಪಾಯ ಸಂಭವಿಸುತ್ತಿತ್ತು. ಹತ್ತಾರು ವಾಹನಗಳು ಸಂಚರಿಸುವ ರಸ್ತೆಯ ಪಕ್ಕದಲ್ಲಿ ಕಂಡು ಬಂದ […]
ಉಡುಪಿ: ರೈಲ್ವೆ ಹಳಿ ಮೇಲೆ ವ್ಯಕ್ತಿಯ ಛಿದ್ರಗೊಂಡ ದೇಹ ಪತ್ತೆ
ಉಡುಪಿ: ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಗುರುವಾರ ರಾತ್ರಿ ಕಂಡುಬಂದಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಟಾರ್ಚ್ ಬೆಳಕಿನ ಸಹಕಾರದಿಂದ ಛಿದ್ರ ದೇಹವನ್ನು ಒಟ್ಟುಗೂಡಿಸಿ, ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ್ ಎಂದು ಶಂಕಿಸಲಾಗಿದೆ. ಈ ದುರ್ಘಟನೆಗೆ ಕಾರಣ ಇನ್ನಷ್ಟೇ ಬಹಿರಂಗವಾಗಬೇಕಿದೆ.