ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ
ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ. ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್ […]
ಕಿನ್ನಿಮೂಲ್ಕಿಯಲ್ಲಿ ನೇತ್ರಜ್ಯೋತಿ ಸಂಸ್ಥೆಗಳ ನೂತನ ಕಟ್ಟಡ ಶುಭಾರಂಭ.
ಉಡುಪಿ: ನೇತ್ರ ಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಸೈನ್ಸಸ್ ಕಾಲೇಜು, ನೇತ್ರ ಜ್ಯೋತಿ ಫಿಸಿಯೋಥೆರಪಿ ಕಾಲೇಜು, ನೇತ್ರ ಜ್ಯೋತಿ ಕಾಲೇಜು ವತಿಯಿಂದ 76ಬಡಗಬೆಟ್ಟು ಕಿನ್ನಿಮೂಲ್ಕಿಯಲ್ಲಿ ನೇತ್ರ ಜ್ಯೋತಿ ಸಂಸ್ಥೆಗಳ ನೂತನ ಕಟ್ಟಡ ಶುಕ್ರವಾರ ಉದ್ಘಾಟನೆಗೊಂಡಿತು. ನೂತನ ಕಟ್ಟಡವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ನೇತ್ರಜ್ಯೋತಿ ಆಸ್ಪತ್ರೆಯಿಂದ ಸಮಾಜಕ್ಕೆ ಒಳ್ಳೆಯ ಸೇವಾಕಾರ್ಯ ಪ್ರಾಪ್ತಿ ಆಗಲಿ. ದೇವರು ಕರುಣಿಸಿದ ಕಣ್ಣು ಜಗತ್ತಿಗೆ ದಿವ್ಯ ದೃಷ್ಟಿ ನೀಡುವಂತದ್ದು. […]
ಉಡುಪಿ:ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
ಉಡುಪಿ: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 2300 ರೂ. ಹಾಗೂ ಭತ್ತ ಗ್ರೇಡ್ ಎ ವಿಧಕ್ಕೆ ದರ 2320 ರೂ. ರಂತೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಖರೀದಿ ಏಜೆನ್ಸಿಯವರು ರೈತರಿಂದ ಭತ್ತದ ನೊಂದಣಿ ಪ್ರಕ್ರಿಯೆಯನ್ನು […]
ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ವೇತನ ಸಹಿತ ರಜೆ
ಉಡುಪಿ: ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಿಗಧಿಪಡಿಸಿದ್ದು, ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆನ್ನುವುದು ಆಯೋಗದ ಧ್ಯೇಯೋದ್ದೇಶವಾಗಿರುತ್ತದೆ. ಈ ಹಿನ್ನೆಲೆ, ಮತದಾನ ನಡೆಯಲಿರುವ ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು, ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮತದಾನ ದಿನದಂದು […]
ಉಡುಪಿ:ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ : ವಿವಿಧ ಆಟೋಟ ಸ್ಪರ್ಧೆಗಳು
ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಇದರ ಅಂಗವಾಗಿ ಬುಧವಾರ ಅಜ್ಜರಕಾಡುವಿನವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಿಗೆ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸಂಗೀತ ಜಾನ್ಸನ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಮಾರು […]