ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ಮದ್ಯ ಮಾರಾಟ ನಿಷೇದ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ
ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ […]
ಉಡುಪಿ:ಸರ್ಕಾರದ ಯೋಜನೆಗಳು ಹಾಗೂ ಬ್ಯಾಂಕುಗಳ ಸಾಲ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೆನರಾ ಬ್ಯಾಂಕ್ ಉಡುಪಿ ಇವರ ವತಿಯಿಂದ ಕೇಂದ್ರ ಸರಕಾರದ ಸಾಲ ಯೋಜನೆಗಳಾದ ಪಿ.ಎಂ ವಿಶ್ವಕರ್ಮ ಯೋಜನೆ, ಸ್ವನಿಧಿ ಯೋಜನೆ, ಮುದ್ರಾ ಯೋಜನೆ ಮತ್ತು ಇತರ ಸಾಲ […]
ಬೆಳ್ತಂಗಡಿ: ಕತ್ತಿಯಿಂದ ಕಡಿದು ಪ್ರಗತಿಪರ ಕೃಷಿಕನ ಬರ್ಬರ ಹತ್ಯೆ.
ಬೆಳ್ತಂಗಡಿ: ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ನ.8ರ ರಾತ್ರಿ ನಡೆದಿದೆ. ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ವ್ಯಕ್ತಿ. ಅವರನ್ನು ಸಮೀಪದ ಸಂಬಂಧಿ ಹರೀಶ್ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೊಲ್ಲೂರು: ವ್ಯಕ್ತಿ ನಾಪತ್ತೆ
ಉಡುಪಿ: ನ.9: ಉಡುಪಿ ಜಿಲ್ಲೆಯ ಮುದೂರು ಗ್ರಾಮದ ಜಯ ಕುಮಾರ್(58) ಎಂಬವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ನ.7ರಂದು ಆಟೋ ರಿಕ್ಷಾದಲ್ಲಿ ಜಡ್ಕಲ್‌ಗೆ ಚಿಕಿತ್ಸೆಗೆಂದು ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ; ಪ್ರಕರಣ ದಾಖಲು
ಉಡುಪಿ, ನ.9: ವ್ಯಕ್ತಿಯೊಬ್ಬರಿಗೆ ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೇಖರ(77) ಎಂಬವರ ಮೊಬೈಲ್‌ಗೆ ನ.7ರಂದು ಕೆನರಾ ಬ್ಯಾಂಕ್‌ನವರು ಎಂದು ಹೇಳಿ ಕರೆ ಮಾಡಿ, ಕೆವೈಸಿ ಅಪ್‌ಡೇಟ್ ಆಗದೆ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿದ್ದರು. ಬಳಿಕ ಶೇಖರ ಅವರಿಂದ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.