ಮಣಿಪಾಲ: ನ.19 ರಂದು ಓರೇನ್ ಇಂಟರ್ನ್ಯಾಷನಲ್ ‘ಕೂದಲು ಉದುರುವಿಕೆ ಚಿಕಿತ್ಸೆ’ ಉಚಿತ ಕಾರ್ಯಾಗಾರ.
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್) ಓರೇನ್ ಇಂಟರ್ನ್ಯಾಷನಲ್ ‘ಕೂದಲು ಉದುರುವಿಕೆ ಚಿಕಿತ್ಸೆ’ ನೋಡಿ ಕಲಿಯಿರಿ ಉಚಿತ ಕಾರ್ಯಾಗಾರ ನ.19 ಬೆಳಗ್ಗೆ 11:30 ರಿಂದ 1:00 ವರೆಗೆ ನಡೆಯಲಿದೆ. ಕಲಿಕೆಯ ಫಲಿತಾಂಶಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಓರೇನ್ ಇಂಟರ್ನ್ಯಾಷನಲ್, ಎಂಎಸ್ ಡಿಸಿ ಕಟ್ಟಡ, 3 ನೇ ಮಹಡಿ, ಈಶ್ವರ ನಗರ, ಮಣಿಪಾಲ ಈಗ ನೋಂದಾಯಿಸಿ81231650688123163935
ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ-ಉಡುಪಿ ಎಸ್ಪಿ ಡಾ ಅರುಣ್ ಕುಮಾರ್ ಹೇಳಿಕೆ
ಚೇರ್ಕಾಡಿ ಗ್ರಾಮದಲ್ಲಿ ಮಹಿಳೆ, ಮಕ್ಕಳಿಗೆ ಕಿರುಕುಳ ನೀಡಿದ್ದ ಅರೋಪ ಅಪರಿಚಿತ ವ್ಯಕ್ತಿಯಿಂದ ಕಿರುಕುಳವಾಗುತ್ತಿದೆ ಎಂದು ದೂರಲಾಗಿತ್ತು.ಶನಿವಾರ ಸಂಜೆ 7:45 ಕ್ಕೆ ಈ ಬಗ್ಗೆ ಮಾಹಿತಿ ಬಂದಿದ್ದು,ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮಹಿಳೆಗೆ ತೊಂದರೆ ಕೊಟ್ಟಿರುವುದು ಕಂಡುಬಂದಿದ್ದು,ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.ದೂರುದಾರ ಮಹಿಳೆ ತಮ್ಮನ ಜೊತೆ ಠಾಣೆಗೆ ಬಂದು ಕಂಪ್ಲೇಂಟ್ ಕೊಟ್ಟಿದ್ದಾರೆ.ನನಗೆ ಕಿರುಕುಳ ನೀಡಿದ್ದಾಗಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಲಾಕ್ ಅಪ್ ನಲ್ಲಿ ಇಡಲಾಗಿತ್ತು. ಸೆಂಟ್ರಿ ಡ್ಯೂಟಿ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಬೆಳೆಗ್ಗೆ 3:45 ಕ್ಕೆ […]
ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣ: ಆರೋಪಿ ಠಾಣೆಯಲ್ಲೇ ಮೃತ್ಯು
ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಮೃತಪಟ್ಟಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯ ಸೆಲ್ ನ ಬಾತ್ ರೂಮಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್(42) ಎಂದು ಗುರುತಿಸಲಾಗಿದೆ. ಈತ ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದನು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನ.9ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ […]
ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ […]