ಕಾರ್ಕಳ: ವೆಂಕಟರಮಣ ದೇವಸ್ಥಾನದಲ್ಲಿ ಭಕ್ತರ ಕಣ್ಮನ ಸೆಳೆದ ವಿಶ್ವರೂಪ ದರ್ಶನ

ಉಡುಪಿ: ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ನೆರೆದ ಅಸಂಖ್ಯಾತ ಭಕ್ತರ ಕಣ್ಮನ ಸೆಳೆಯಿತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ಆ ದೃಶ್ಯ ಸಹೃದಯಿ ಭಕ್ತರ ಮನಕ್ಕೆ ಮುದನೀಡಿತು. ದೇವಾಲಯದ ಒಳ ಪ್ರಾಂಗಣದಲ್ಲಿ ವರ್ಣರಂಜಿತ ರಂ ಗೋಲಿಗಳು ಮೂಡಿದ್ದವು. ಅದರಲ್ಲೂ ತ್ರೀಡಿ ಎಫೆಕ್ಟ್ ನ ಈ ರಂಗೋಲಿಗಳು ನೋಡುಗರಿಗೆ ಅಚ್ಚರಿ ಹುಟ್ಟಿಸಿತು. ನಸುಕಿನ ವೇಳೆ ಮೂರು ಗಂಟೆಗೆ ಮಣ್ಣಗೋಪುರದಿಂದ ಭಜನೆ […]

ಉಡುಪಿ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಉಡುಪಿ: ಉಪ್ಪೂರು ಕೊಳಲಗಿರಿಯ ರವಿತೇಜ (36) ನರ್ನಾಡು ಮದಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ನ.7ರ ರಾತ್ರಿಯಿಂದ ಕಾಣೆಯಾಗಿದ್ದು, ರವಿವಾರ ಬೆಳಗ್ಗೆ ಮೃತದೇಹ ದೊರೆತಿದೆ. ವಿಪರೀತ ಮದ್ಯಪಾನ ಅಭ್ಯಾಸ ಇದ್ದು ಚಿಕಿತ್ಸೆ ಕೊಡಿಸಿದರೂ ಮದ್ಯಸೇವನೆ ಮುಂದುವರಿಸಿದ್ದರು ಎನ್ನಲಾಗಿದೆ.ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌ ಪಡೆದಿದ್ದ ಬಾಲಕಿ ನಿಧನ

ಮಂಗಳೂರು: ಲಿಮ್ಕಾ ಬುಕ್‌ ಆಫ್‌ ರೆಕಾಡ್ಸ್‌ನ ಬಾಲಕಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು. ಮೃತ ಹೊಂದಿದ ಬಾಲಕಿ ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ (7). 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ […]

ಕುಂದಾಪುರ: ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನಾನ್

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ , ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2024- 25 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ […]

ಉಡುಪಿ: ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ: ಶ್ರೀನಿಧಿ ಹೆಗ್ಡೆ

ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ವಕೀಲ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದಿಸಿದ್ದಾರೆ. ಆರಂಭದಲ್ಲಿ ಸಾಕಷ್ಟು ಖ್ಯಾತಿ ಪಡೆದ ಎಸ್ಪಿ ಡಾ.ಅರುಣ್ ಅವರ ಅವಧಿಯಲ್ಲಿ ನಡೆದ ಘನಘೋರ ಅಪರಾಧಗಳನ್ನು ಪತ್ತೆಹಚ್ಚುವಲ್ಲಿ ಅವರ ನೇತೃತ್ವದಲ್ಲಿ ಜಿಲ್ಲಾ […]