ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಹಕಾರಿ ಸಪ್ತಾಹದ ಧ್ಯೇಯ ವಾಕ್ಯ “ವಿಕಸಿತ ಭಾರತ ನಿರ್ಮಾಣದಲ್ಲಿ […]
ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ
ಉಡುಪಿ: ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು ಈ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ 25ನೇ […]
ಉಡುಪಿ:ಒನಕೆ ಓಬವ್ವ ಸ್ತ್ರೀ ಶಕ್ತಿಯ ಸಂಕೇತ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ […]
ಉಡುಪಿ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜ್ಯ ಶಾಸ್ತ್ರವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲ್ಪಡುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಶನಿವಾರ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು. ನಗರಸಭಾ ಅಧ್ಯಕ್ಷ […]
ಉಡುಪಿ ತಾಲೂಕು – ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ
ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನುಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು […]