ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ‘ಆವಿಷ್ಕಾರ ಬಿಸಿನೆಸ್ ಡೇ’
ಕುಂದಾಪುರ ನ.14:ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ನಮ್ಮಲ್ಲಿ ನಕರಾತ್ಮಕ ಯೋಚನೆಗಳು ಬರಬಾರದು. ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಇವತ್ತು ಬಹುತೇಕ ಅವಘಡಗಳಿಗೆ ಮೊಬೈಲ್ ಬಳಕೆಯೇ ನೆಪವಾಗುತ್ತಿದೆ. ಆತ್ಮಹತ್ಯೆ ಯಂತಹ ನಕರಾತ್ಮಕ ಯೋಚನೆಗಳು ಮನಸಿನಲ್ಲಿ ಮೂಡಬಾರದು ಎಂದು ಪ್ರಸಿದ್ಧ ಮುಳುಗುತಜ್ಞ ಈಶ್ವರ ಮಲ್ಪೆ ಹೇಳಿದರು. ನ.12ರಂದು ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ ಬ್ಯುಸಿನೆಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜಸೇವಕ ರವಿ ಕಟಪಾಡಿ, ಬದುಕು ನಾವು ಭಾವಿಸಿದಂತೆ ಇರುವುದಿಲ್ಲ ನಾವು ಏನೆಂಬುದನ್ನು […]
ಉಡುಪಿ:ನವಜಾತ ಶಿಶುವಿನ ಆರೈಕೆಗೆ ತಾಯಂದಿರು ಹೆಚ್ಚಿನ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ
ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು,ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]
ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ವಾಗತಾರ್ಹ ವಾತಾವರಣ ಕಲ್ಪಿಸಿ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ, ಮತ್ತಷ್ಟು ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಬೇಕು ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿ ರೂ. ಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. […]
ಉಡುಪಿ:ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ […]