ಬೈಂದೂರು: ವ್ಯಕ್ತಿ ನಾಪತ್ತೆ

ಬೈಂದೂರು: ಶಿರೂರಿನ ಸಯ್ಯದ್ ಶಬ್ಬೀರ್ ಸಾಹೇಬ್(68) ಎಂಬವರು ನ.16ರಂದು ಬೆಳಗ್ಗೆ ಮನೆಯಿಂದ ಶಿರೂರು ಪೇಟೆಗೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಪೊಲೀಸ್ ಎನ್ಕೌಂಟರ್‌’ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ […]