ಉಡುಪಿ: ಶಾಲಾ ಪಠ್ಯ ಪುಸ್ತಕದಲ್ಲಿ ಸಹಕಾರಿ ಕ್ಷೇತ್ರದ ವಿಷಯ ಸೇರ್ಪಡೆಗೆ ಸರಕಾರ ಶ್ರಮಿಸಲಿ

ಉಡುಪಿ: ಶಾಲಾ ಪಠ್ಯ ಪುಸ್ತಕದಲ್ಲಿ ಸಹಕಾರಿ ಕ್ಷೇತ್ರದ ವಿಷಯವನ್ನು ಸೇರಿಸುವ ಬಗ್ಗೆ ಸಹಕಾರಿ ಸಚಿವರ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸಲಾಗಿದೆ. ಅದನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರಕಾರ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ಉಡುಪಿ […]

ಉಡುಪಿ: ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ ಪ್ರದಾನ.

ಉಡುಪಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ಇದರ ವತಿಯಿಂದ ನೀಡಲಾಗುವ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿಯನ್ನು ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಯ ಸಾಹಿತಿ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಗೋ. ರು. ಚನ್ನಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ […]

ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯಸಂಸ್ಕಾರ

ಉಡುಪಿ: ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಇಂದು ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು. ಇದಕ್ಕೂ ಮುನ್ನ ಮಣಿಪಾಲದಿಂದ ಅಂಬುಲೆನ್ಸ್‌ನಲ್ಲಿ ಕೂಡ್ಲುವಿಗೆ ಶವ ರವಾನೆ ಮಾಡಲಾಯಿತು. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ಚಿತೆಗೆ ವಿಕ್ರಂ ಗೌಡ ಸಹೋದರ ಸುರೇಶ್ ಗೌಡ ಬೆಂಕಿಇಟ್ಟರು.ಕೂಡ್ಲು ಗ್ರಾಮದಲ್ಲಿ ವಿಕ್ರಂ ಗೌಡ ಕುಟುಂಬಕ್ಕೆ ಸೇರಿದ ಒಂದು ಎಕರೆ ಭೂಮಿ ಇದೆ. ಇದೇ ಜಮೀನಿನಲ್ಲಿ ಸಹೋದರ, ತಂಗಿ […]

ಕುಂದಾಪುರ: ಇನ್ನೋವಾ ಕಾರಿಗೆ ಇನ್ಸುಲೇಟ‌ರ್ ವಾಹನ ಡಿಕ್ಕಿ; ಏಳು ಮಂದಿ ಗಂಭೀರ

ಉಡುಪಿ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟ‌ರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ. ಕೇರಳ ಮೂಲದ ಇನ್ನೋವಾ ಕಾರ್‌ನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದು, ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ […]

ನವೆಂಬರ್ 22 ರಂದು ಐತಿಹಾಸಿಕ ಬಿಲ್ಲಾಡಿ ದೊಡ್ಮನೆ ಕಂಬಳ ಮಹೋತ್ಸವ

ಸುಮಾರು 500 ವರ್ಷಗಳ ಇತಿಹಾಸವಿರುವ ಐತಿಹಾಸಿಕ ಬಿಲ್ಲಾಡಿ ದೊಡ್ಮನೆ ಕುಟುಂಬಸ್ಥರ ನೇತ್ರತ್ವದಲ್ಲಿ ನಡೆಯುವ ಉದ್ಭವ ಮಹಾಗಣಪತಿ ಕೇಚರಾಹುತ ಕಂಬಳ ಮಹೋತ್ಸವವು 22-11-2024 ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶುಭ ಮುಹೂರ್ತದಲ್ಲಿ ಪರಂಪರೆಯ ಸಾಂಪ್ರದಾಯದಂತೆ ಘೋರಿ ಮೆಟ್ಟುವುದರ ಮೂಲಕ ಉದ್ಘಾಟನೆಗೊಳಲಿದೆ. ಮದ್ಯಾಹ್ನ 4.30 ಕ್ಕೆ ಕೋಣಗಳ ಸ್ಪರ್ದೆ ಆರಂಭಗೊಂಡು ರಾತ್ರಿ 9.30 ರ ತನಕ ಹೊನಲು ಬೆಳಕಿನಲ್ಲಿ ನಡೆಯಲಿದ್ದು,ರಂಗ ಪೂಜೆ ಸೇರಿದಂತೆ ವಿವಿಧ ದಾರ್ಮಿಕ ಕಾರ್ಯಕ್ರಮ ನಡೆಯಲಿದೆ.ಸ್ಪರ್ದೆಗಳು ಈ ಕೆಳಗಿನಂತಿದೆ. ಹಲಗೆ ಓಟ :ಪ್ರಥಮ :12000 + ಶಾಶ್ವತ […]