ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ.

ಉಡುಪಿ: ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ೨೦೨೩ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.೧೯ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಡಿ.ವೇದವ್ಯಾಸ […]

ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ; ಡಿಸಿಎಂ ಡಿಕೆ ಶಿವಕುಮಾರ್

ಉಡುಪಿ: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಪಡೆದ ಬಳಿಕ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿಯಾಗಿ ದೇವರ ಸನ್ನಿಧಿಯಲ್ಲಿ ಈ ಮಾತನ್ನು ಹೇಳುತ್ತಿದ್ದೇನೆ. ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಯಾರು ಅರ್ಹ ಫಲಾನುಭವಿಗಳಿದ್ದರೆ ಅವರೆಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ. ಯಾರಿಗೂ […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇಗುಲಕ್ಕೆ ಪ್ರವೇಶಿಸುತ್ತಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ದೇಗುಲದ ಆಡಳಿತ ಮಂಡಳಿ, ಅರ್ಚಕರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ಬಳಿಕ ಗರುಡಗಂಬಕ್ಕೆ ಕೈಮುಗಿದು ದೇಗುಲ ಪ್ರವೇಶ ಮಾಡಿದ ಡಿಕೆಶಿ ದಂಪತಿ ಕೊಲ್ಲೂರು ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ಮಾಂಕಾಳು ವೈದ್ಯ, ಮಾಜಿ ಶಾಸಕ ಗೋಪಾಲ ಪೂಜಾರಿ, ಉದ್ಯಮಿ ಬಿ.ಬಿ ಶೆಟ್ಟಿ, ರಾಜು ಪೂಜಾರಿ ಸಾಥ್ […]

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್- ದೂರು ದಾಖಲು

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ, ಪೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್ ಖಾತೆ ಸೃಷ್ಟಿಸಿ ಫ್ರೆಂಡ್ request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್ ಪೊಲೀಸ್ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು […]

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು; ಹೋಂ ನರ್ಸ್ ಬಂಧನ

ಉಡುಪಿ: ಉಡುಪಿ ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಹೋಂ ನರ್ಸ್ ಅನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಬಂಧಿತ ಆರೋಪಿ. ಈತ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದನು. ಮನೆಯ ಹಾಲ್‌ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಕಪಾಟಿನಲ್ಲಿದ್ದ ಲಾಕರ್‌ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ 31,17,100 ರೂ. ಮೌಲ್ಯದ […]