ಉಡುಪಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು.

ಉಡುಪಿ: ಉಡುಪಿ ಬಡಗುಬೆಟ್ಟು ನಿವಾಸಿ ಸುರೇಶ್‌ (59) ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮದ್ಯಸೇವನೆ ಚಟ ಹೊಂದಿದ್ದ ಅವರು ಕುಕ್ಕಿಕಟ್ಟೆ ರಸ್ತೆಯ ಬಳಿ ಬಿದ್ದು ಹಣೆಗೆ ಪೆಟ್ಟಾಗಿದ್ದು, ಸಂಬಂಧಿ ಅಕ್ಷಯ ಅವರು ಮನೆಗೆ ಕರೆದುಕೊಂಡು ಹೋಗಿ, ಅನಂತರ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ ವೇಳೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ, ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ.

ಮಂಗಳೂರು: ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ಸುಧೀರ್‌(27)ನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ವಿವರ:ಬಾಲಕಿಯು(13) ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಆರೋಪಿ ಸುಧೀರ್‌ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಹೋಗುತ್ತಿದ್ದಳು. ಕೆಲವೊಂದು ಬಾರಿ ಸುಧೀರ್‌ ಮಾತ್ರ ಮನೆಯಲ್ಲಿರುತ್ತಿದ್ದು, […]

ಮೂಡುಬಿದಿರೆ: ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಎಂದು ಗುರುತಿಸಲಾಗಿದೆ. ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಉಡುಪಿ: ನ.28 ರಂದು ಉಚಿತ ವಾಕ್ ಮತ್ತು ಶ್ರವಣ ದೋಷ ತಪಾಸಣಾ ಶಿಬಿರ ಹಾಗೂ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲೆಯ ಗೌರವಾನ್ವಿತ ಪ್ರತಿಷ್ಠಿತ ಸಂಘ ಸಂಸ್ಥೆಗಳಾದ ರೋಟರಿ ಕ್ಲಬ್ ಕಲ್ಯಾಣಪುರ, ಲಯನ್ಸ್ ಅಂಡ್ ಲಿಯೋ ಕ್ಲಬ್ ಅಮೃತ್ ಉಡುಪಿ, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ಜಂಟಿ ಆಶ್ರಯದಲ್ಲಿ ಕೇಂದ್ರ ಸರಕಾರದ ಯೋಜನೆಯನ್ನು ಶ್ರವಣದೋಷ ಇರುವ ದಿವ್ಯಾಂಗರಿಗೆ ತಲುಪಿಸುವ ದೃಷ್ಟಿಯಲ್ಲಿ ಒಟ್ಟು 300 ಜನ ದಿವ್ಯಾಂಗರನ್ನು ಸೇರಿಸಿಕೊಂಡು ಅವರಿಗೆ ಬೇಕಾದ ಉತ್ತಮ ಮಟ್ಟದ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮವನ್ನು ದಿನಾಂಕ 28. 11.2024 ನೇ ಗುರುವಾರದಂದು ಅಮೃತ್ ಗಾರ್ಡನ್, ಅಂಬಾಗಿಲು ಇಲ್ಲಿ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿದೆ ಎಂದು […]

ಮಣಿಪಾಲ: ಕ್ರಿಸ್ಮಸ್ ಕೇಕ್ ತಯಾರಿಕೆಗೆ ಮಿಕ್ಸಿಂಗ್ ಕಾರ್ಯ

ಉಡುಪಿ: ಮಣಿಪಾಲದ ವೆಲ್‌ಕಮ್ ಗ್ರೂಪ್ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (ವಾಗ್ಶಾ) ವತಿಯಿಂದ ಮುಂಬರುವ ಕ್ರಿಸ್ಮಸ್ ಹಬ್ಬಕ್ಕಾಗಿ ಸಾಂಪ್ರದಾಯಿಕ ಕೇಕ್ ಮಿಕ್ಸಿಂಗ್ ಕಾರ್ಯಕ್ರಮ ನಡೆಯಿತು. ವಾಗ್ಶಾ ವಿದ್ಯಾರ್ಥಿಗಳ ತರಬೇತಿಯ ‘ಲವಣ ರೆಸ್ಟೋರೆಂಟ್’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು, ಮಾಹೆ ತಂಡ, ಪೈ ಕುಟುಂಬ, ಆಡಳಿತ ಮುಖ್ಯಸ್ಥರು, ಸ್ಥಳೀಯ ಗಣ್ಯರು ಪ್ರತಿವರ್ಷ ಕ್ರಿಸ್ಮಸ್‌ಗೆ ಒಂದು ತಿಂಗಳು ಮೊದಲೇ ನಡೆಯುವ ಸಾಂಪ್ರದಾಯಿಕ ಕ್ರಿಸ್ಮಸ್ ಕೇಕ್‌ಮಿಕ್ಸ್‌ನಲ್ಲಿ ಭಾಗಿಯಾದರು. ಭಾಗವಹಿಸಿದ ಎಲ್ಲರೂ ಬಾಣಸಿಗ ಟೊಪ್ಪಿ ಹಾಗೂ ಆಫ್ರಾನ್ ಧರಿಸಿ ಒಣದ್ರಾಕ್ಷಿ, […]