ಉಡುಪಿ:ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕತರಗತಿಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನವೆಂಬರ್ 23 ರಂದು ಕಾರ್ಕಳ ಬಿ.ಆರ್.ಸಿ ಯಲ್ಲಿ, ಬೈಂದೂರು ಮತ್ತು ಕುಂದಾಪುರ ವಲಯದವರಿಗೆನವೆಂಬರ್ 25 ರಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಉಡುಪಿ ಮತ್ತು ಬ್ರಹ್ಮಾವರ ವಲಯದವರಿಗೆ ನವೆಂಬರ್ 26 ರಂದು ನಗರದ ಅಜ್ಜರಕಾಡು ಬಿ.ಆರ್.ಸಿಯಲ್ಲಿ ನಡೆಯಲಿದೆ. ಮಕ್ಕಳ ಅಗತ್ಯ […]
ಉಡುಪಿ:ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ ವಿವಿಧಇಲಾಖೆಗಳ ಸಹಕಾರ ಕೋರಿ ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಮಂಗಳವಾರ ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರಾದ ಪಿ.ಆರ್.ಗುರುರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮಂಗನಕಾಯಿಲೆ, ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ನ್ಯುಮೋನಿಯಾ ತಡೆಗಟ್ಟುವಿಕೆ, ನವಜಾತ ಶಿಶು ಸಪ್ತಾಹ, ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಠರೋಗ […]
ಉಡುಪಿ:ಕೆ-ಸೆಟ್ ಪರೀಕ್ಷೆ : ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯಲಿರುವ ಕೆ-ಸೆಟ್ -2024 ಪರೀಕ್ಷೆಗಳು ನವೆಂಬರ್ 24 ರಂದು ಜಿಲ್ಲೆಯ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು […]
ಉಡುಪಿ:ಮದ್ಯ ಮಾರಾಟ ನಿಷೇಧ : ಆದೇಶ ಹಿಂತೆಗೆತ

ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್‌ನ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ನಡೆಯದೇ ಇರುವ ಹಿನ್ನೆಲೆ, ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್ 21 ರ ಸಂಜೆ 5 ಗಂಟೆಯಿಂದ ನವೆಂಬರ್ 23 ರ ಸಂಜೆ 5 ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉದ್ಯಮಶೀಲತಾ ತರಬೇತಿ ಕಾರ್ಯಾಗಾರ

ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕಾರ್ಕಳ ಶಾಖಾಗ್ರಂಥಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಧ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ಶಾಖಾ ಗ್ರಂಥಾಲಯದ ಗ್ರಂಥಪಾಲಕಿ ವನಿತಾ, ಕಾರ್ಕಳ ಶ್ರೀ ವೆಂಕರಮಣ ಮಹಿಳಾ […]