ಉಡುಪಿ:ನೇರ ಸಂದರ್ಶನ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 22 ರಂದು ಬೆಳಗ್ಗೆ10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ,ಲಿ., ಆಭರಣ ಜುವೆಲ್ಲರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]

ಉಡುಪಿ: ವಿಷದ ಹಾವು ಕಡಿತ; ಚಿಕಿತ್ಸೆ ಫಲಕಾರಿಯಾಗದೆ ಕೃಷಿಕ ಮೃತ್ಯು.

ಉಡುಪಿ: ವಿಷದ ಹಾವು ಕಚ್ಚಿದ ಪರಿಣಾಮ ಗದ್ದೆಯಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನ.20ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಹೆಜಮಾಡಿ ಗ್ರಾಮದ ಜಯಕರ(66) ಎಂದು ಗುರುತಿಸಲಾಗಿದೆ. ಇವರು ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, ನ.21: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆ ಸೇವೆಯಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಯಿತು. ನವೀಕರಿಸಿದ ಸೌಲಭ್ಯಗಳು ರೋಗಿಗಳು ಮತ್ತು ಸಂದರ್ಶಕರಿಗೆ ಆರಾಮದಾಯಕ ಅನುಭವವನ್ನು ಖಾತ್ರಿಪಡಿಸುವ, ಉತ್ತಮವಾಗಿ ವಿನ್ಯಾಸಗೊಳಿಸಲಾದ ಕಾಯುವ ಕೋಣೆಯೊಂದಿಗೆ ಆರಾಮದಾಯಕ ಸಮಾಲೋಚನೆ ಸೌಲಭ್ಯವನ್ನು ಒಳಗೊಂಡಿವೆ. ಡೇ ಕೇರ್ ಕೇಂದ್ರವು ಕೀಮೋಥೆರಪಿ ಮತ್ತು ಇತರ ವಿಶೇಷ […]