ಉಡುಪಿ:ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ಮಟ್ಟದಲ್ಲಿ ಹಾಗೂ ಉದ್ದು ಮತ್ತು ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು 2024-25 ಯೋಜನೆಯ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅಧಿಸೂಚಿತ ಬೆಳೆಗಳ ವಿವರ ಹೀಗಿದೆ: ಭತ್ತದ ಬೆಳೆಗೆ ಉಡುಪಿ ಹಾಗೂ ಕಾಪು ತಾಲೂಕಿನ ತಲಾ 2 ಗ್ರಾ.ಪಂಚಾಯತ್, ಬ್ರಹ್ಮಾವರ ತಾಲೂಕಿನ 7 ಗ್ರಾ.ಪಂಚಾಯತ್, ಕುಂದಾಪುರ […]

ಉಡುಪಿ:ವಿಕಲಚೇತನರ ದಿನಾಚರಣೆಗೆ ಅಗತ್ಯ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ […]

ಉಡುಪಿ:ನಿಷೇಧಾಜ್ಞೆ ಹಾಗೂ ಸಂತೆ, ಜಾತ್ರೆ ನಿಷೇಧ ಆದೇಶ ಹಿಂತೆಗೆತ -ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ

ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್‌ನ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ನಡೆಯದೇ ಇರುವ ಹಿನ್ನೆಲೆ, ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಸಂತೆ ಮತ್ತು ಎಲ್ಲಾ ತರಹದಜಾತ್ರೆಗಳನ್ನು ನಿಷೇಧಿಸಿ, ಹೊರಡಿಸಿರುವ ಆದೇಶವನ್ನು ಹಾಗೂ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ:ಜಿಲ್ಲೆಯಲ್ಲಿ ಕೆ.ಎಫ್ .ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ […]