ಐಪಿಎಲ್‌ ಮೆಗಾ ಹರಾಜು 2025: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

ಜೆಡ್ಡಾ: ಬಹುನಿರೀಕ್ಷಿತ ಐಪಿಎಲ್‌ ಮೆಗಾ ಹರಾಜು 2025 ಆರಂಭವಾಗಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ಶನಿವಾರ (ನ.24) ನಡೆಯುತ್ತಿದೆ. ಮಲ್ಲಿಕಾ ಸಾಗರ್ ಐಪಿಎಲ್‌ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮೊದಲ ಸೆಟ್‌ ನಲ್ಲಿಯೇ ಭಾರಿ ಬಿಡ್ಡಿಂಗ್‌ ನಡೆದಿದ್ದು, ಪಂತ್‌ ಮತ್ತು ಅಯ್ಯರ್‌ ದಾಖಲೆಯ ಬೆಲೆಗೆ ಮಾರಾಟವಾದರು. ಆರಂಭದಲ್ಲಿ ಅರ್ಶದೀಪ್‌ ಸಿಂಗ್‌ ಅವರು 18 ಕೋಟಿಗೆ ಪಂಜಾಬ್‌ ಕಿಂಗ್ಸ್‌ ಪಾಲಾದರು. ಬಳಿಕ ರಬಾಡಾ ಗುಜರಾತ್‌ ಟೈಟಾನ್ಸ್‌ ಗೆ ಬಳಿಕ ಶ್ರೇಯಸ್‌ ಅಯ್ಯರ್‌ ಅವರು ದಾಖಲೆಯ 26.75 ಕೋಟಿ ರೂ ಬೆಲೆಗೆ […]

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ದಂಪತಿ ಮೃತ್ಯು.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ಮಧ್ಯದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಾಲುವೆಗೆ ಬಿದ್ದು ದಂಪತಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಕೊಲ್ಲಾಪುರ್ ಜಿಲ್ಲೆಯ ಕರವೀರ ತಾಲೂಕಿನ ಕೂಟೆರ ಗ್ರಾಮದ ಆದರ್ಶ ಯುವರಾಜ್ ಪಾಂಡವ್ (27), ಶಿವಾನಿ ಆದರ್ಶ್ ಪಾಂಡವ (20) ಎಂದು ಗುರುತಿಸಲಾಗಿದೆ. ಇನ್ನೂ ಉಳಿದ ಐವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಫೋರ್ಡ್ ಕಾರಿನಲ್ಲಿ ಕಾಗವಾಡ ತಾಲೂಕಿನ ಐನಾಪುರದ ಸಂಬಂಧಿಕರ ‌ಮನೆ ಕಾರ್ಯಕ್ರಮಕ್ಕೆ ಬಂದಿದ್ದರು. ಮರಳಿ […]

ಜಿಲ್ಲಾಮಟ್ಟದ ರೇಂಜರ್’ಗಳ ಪ್ರೇರಣ ಶಿಬಿರ ಉದ್ಘಾಟನೆ.

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ […]

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

ಬೆಂಗಳೂರು: “ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಬಿಟ್ಟುಹೋದ ಗುರುತಿಗೆ ಜನ ತೀರ್ಪು ನೀಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದರು. “ಈ ಫ‌ಲಿತಾಂಶವು ನಿಖಿಲ್‌ ಕುಮಾರಸ್ವಾಮಿ ಅವರ ಸೋಲು ಎಂದು ನಾನು ಹೇಳುವುದಿಲ್ಲ. ಅವರ ತಂದೆ ಎಚ್‌. ಡಿ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಮುಖ್ಯಮಂತ್ರಿ ಆಗಿದ್ದರು. ಅವರು ಆ ಕ್ಷೇತ್ರದಲ್ಲಿ ಬಿಟ್ಟುಹೋದ ಗುರುತಿಗೆ ಈಗ ಜನ ತೀರ್ಪು ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಟಾಂಗ್‌ ಕೊಟ್ಟರು. “ಅದೇ ರೀತಿ, ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ […]