ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡುವಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನು ಹಾರಿ ಬಿಡುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು. ಸಮಾಜದಲ್ಲಿ ಶಾಂತಿ ಮತ್ತು […]
ನಗರ ನಕ್ಸಲರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು: ಸುನಿಲ್ ಕುಮಾರ್ ಒತ್ತಾಯ
ಉಡುಪಿ: ಕಾಡಿನ ಒಳಗೆ ಬಂದೂಕು ಇಟ್ಟುಕೊಂಡು ಕೆಲಸ ಮಾಡುವವರು ನಕ್ಸಲರು. ಪ್ರತ್ಯಕ್ಷ ಪರೋಕ್ಷ ಸಹಕಾರ ಕೊಡುವವರು ನಗರ ನಕ್ಸಲರು. ನಗರ ನಕ್ಸಲರು ಇದು ನಕಲಿ ಎನ್ ಕೌಂಟರ್, ತಪ್ಪು ಎನ್ನಬಹುದು. ಪರವಾಗಿಲ್ಲ, ಎ ಎನ್ ಎಫ್ ಕಾರ್ಯವನ್ನು ನಾವು ಅಭಿನಂದಿಸುತ್ತೇವೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು. ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎನ್ ಕೌಂಟರ್ ಎಂದು ಹೇಳುತ್ತಿರುವ ಎಡಪಂಥೀಯ ಸಂಘಟನೆಗಳು, ನಕ್ಸಲ್ ಹಿತೈಷಿಗಳ ಆರೋಪಕ್ಕೆ ಉಡುಪಿಯಲ್ಲಿ ಇಂದು ತಿರುಗೇಟು […]
ಉಡುಪಿ:ತ್ರಿಶಾ ಕ್ಲಾಸಸ್ : ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರ
ಉಡುಪಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನವೆಂಬರ್ 23 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆಗೆ ತಮ್ಮ ಮುಂದಿನ ಹಂತದಲ್ಲಿ ಇರಬೇಕಾದ ತಾಳ್ಮೆ, ಸತತ ಪ್ರಯತ್ನ, ಕಠಿಣ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಧಕ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು […]
ಕೋಟತಟ್ಟು ಗ್ರಾಮದಲ್ಲಿ ಹೆಜ್ಜೇನು ದಾಳಿ; ಮೂವರಿಗೆ ಗಾಯ
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರಿಕೆರೆಯಲ್ಲಿ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ಹೆಜ್ಜೇನು ದಾಳಿಗೊಳಗಾದ ಪಂಚಾಯತ್ ಅಧ್ಯಕ್ಷ ಸತೀಶ್ ಬಿ. ಕುಂದರ್, ಉಪಾಧ್ಯಕ್ಷೆ ಸರಸ್ವತಿ ಹಾಗೂ ಅವರ ಮಗಳು ಸೌಜನ್ಯ ಎಂದು ಗುರುತಿಸಲಾಗಿದೆ. ಸರಸ್ವತಿ ಹಾಗೂ ಸೌಜನ್ಯ ಕಲ್ಮಾಡಿ ರಸ್ತೆಯಲ್ಲಿರುವ ನಾಗಬನಕ್ಕೆ ಹೋದ ಸಂದರ್ಭ ಹೆಜ್ಜೇನು ಹಿಂಡೊಂದು ಏಕಾಏಕಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಮಹಿಳೆ ಕೂಗಿಕೊಂಡಾಗ ಅವರ ಸಹಾಯಕ್ಕೆ ದಾವಿಸಿದ್ದ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅವರು ಕೂಡ ಜೇನು ನೊಣಗಳ […]
ಉಡುಪಿ ಎಸ್ಪಿ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ
ಉಡುಪಿ: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಿದವು. ಹಿಂದೂ ಕಾರ್ಯಕರ್ತರು ಉಡುಪಿ ಎಸ್ಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಎಸ್ಪಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು. ಆರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ […]