ರಾಷ್ಟ್ರೀಯ ಹೆದ್ದಾರಿ ಅಸಮರ್ಪಕ ನಿರ್ವಹಣೆ ವಿರುದ್ಧ ನ.28 ರಂದು ಪ್ರತಿಭಟನೆ, ಅನಿರ್ದಿಷ್ಟಾವಧಿ ಮುಷ್ಕರ.

ಕೋಟ: ಇಂಗ್ಲೆಂಡ್ ಮೂಲದ ಕೆ.ಕೆ.ಆರ್ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಸಮರ್ಪಕ ನಿರ್ವಹಣೆ ಮತ್ತು ಬೇಜವಾಬ್ದಾರಿ ವಿರುದ್ಧ ನ.28ರಂದು ಚಿತ್ರಪಾಡಿ ಗ್ರಾಮದಲ್ಲಿರುವ ಮಾರಿಗುಡಿ ಬಳಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾ.ಹೆ. ಹೋರಾಟ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯಿರಿ ಹೇಳಿದರು. ಬೆಳಗ್ಗೆ ಪ್ರತಿಭಟನೆ ಆರಂಭಗೊಳ್ಳಲಿದ್ದು, ಡೋಲು ಬಾರಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೆಕೆಆ‌ರ್ ಜಾಗೃತಿಗೊಳಿಸುವುದು ನಮ್ಮ ಗುರಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೋರಾಟದಲ್ಲಿ ವಿವಿಧ ಸಂಘಟನೆಗಳು ಮತ್ತು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲಿದ್ದು, […]

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮರಕ್ಕೆ ಡಿಕ್ಕಿ: ಓರ್ವ ಮೃತ್ಯು.

ಮಂಗಳೂರು: ಕೊಣಾಜೆಯ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಮರಕ್ಕೆ ಢಿಕ್ಕಿ ಹೊಡೆದು ಓರ್ವ ಸಾವನಪ್ಪಿ, ಇಬ್ಬರು ಗಾಯಗೊಂಡ ಘಟನೆ ನ. 24 ರಂದು ಭಾನುವಾರ ಸಂಜೆ ನಡೆದಿದೆ. ಮೃತರು ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತರು ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ.ಈ […]

ರಿಷಬ್ ಶೆಟ್ಟಿಯವರ ಕಾಂತಾರ ಚಾಪ್ಟರ್​-1 ಚಿತ್ರಕ್ಕೆ ವಿಘ್ನ, ಚಿತ್ರ ಕಲಾವಿದರಿದ್ದ ಬಸ್ ಪಲ್ಟಿ; 6 ಮಂದಿಗೆ ಗಂಭೀರ ಗಾಯ..!

ಉಡುಪಿ:ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್​ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ 25 ಕಲಾವಿದರಿದ್ದ ಬಸ್ ಅಪಘಾತವಾಗಿದೆ. ಬಸ್ ಪಲ್ಟಿ ಆಗಿ ಹಲವರಿಗೆ ಗಾಯವಾಗಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ […]

ಉಡುಪಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು(ನ.25) ಬೃಹತ್ ಜನಾಗ್ರಹ ಸಭೆ

ಉಡುಪಿ: ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ ವಿರುದ್ಧ ಜಿಲ್ಲಾ ಪೊಲೀಸರು ಕೇಸು ದಾಖಲಿಸುತ್ತಿದ್ದು, ಪೊಲೀಸರ ಈ ನಡೆಯ ವಿರುದ್ಧ ಬೃಹತ್ ಜನಾಂದೋಲನ ಪ್ರತಿಭಟನೆಗೆ ಹಿಂಜಾವೇ ಉಡುಪಿ ಜಿಲ್ಲೆ ಕರೆ ನೀಡಿದೆ. ಇಂದು (ನ. 25) ಬೆಳಗ್ಗೆ 10 ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ಪ್ರಮುಖ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ರೌಡಿಶೀಟರ್ ಎಂದು ಗುರುತಿಸಿ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ಒಂದೆರಡು ಹೋರಾಟದ ಕೇಸುಗಳಿದ್ದರೂ ಕಾರ್ಯಕರ್ತರಿಗೆ […]