ಇಲಿ ಪಾಷಣ ಸೇವಿಸಿ, ಚಿಕಿತ್ಸೆ ಫಲಿಸದೆ ಯುವತಿ ಮೃತ್ಯು.
ಕಾಸರಗೋಡು: ಇಲಿ ಪಾಷಣ ಸೇವಿಸಿ ಚಿಂತಾಜಕನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವತಿ ಪಯ್ಯನ್ನೂರು ಬಿಕೆಎಂ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ವಿ ರಜಿತಾ.ನ. 22 ರ ಶುಕ್ರವಾರ ರಾತ್ರಿ ರಚಿತಾ ಇಲಿ ಪಾಷಾಣ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ತ್ರಿಕಾರಿಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಅಸುನೀಗಿದ್ದಾರೆ. ಯುವತಿಗೆ ಒಂದುವರೆ ವರ್ಷದ ಹಿಂದೆ ಮದುವೆಯಾಗಿತ್ತು. ಯಾಕಾಗಿ ವಿಷ […]
ಕುಡಿಯುವ ನೀರು ನೈರ್ಮಲ್ಯ ಮಾಹಿತಿ ಶಿಬಿರ ಮತ್ತು ವಸ್ತುಪ್ರದರ್ಶನ
ಉಡುಪಿ: ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಸ್ಕೋಡ್‌ವೇಸ್ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಉಡುಪಿ ಜಿಲ್ಲೆಯ ಗ್ರಾಮೀಣ ಮತ್ತು ನಗರದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕುಡಿಯುವ ನೀರು ಮತ್ತು ನೈರ್ಮಲ್ಯದ ಕುರಿತಾದ ಮಾಹಿತಿ ಮತ್ತು ಪ್ರಾತಿಕ್ಷಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ವಸ್ತು ಪ್ರದರ್ಶನವು ನವೆಂಬರ್ 27 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ. ಶಂಕರ್ […]
ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ
ಉಡುಪಿ: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು. ಅವರುಗಳು ತಮ್ಮ ಕರ್ತವ್ಯದ ಜವಾಬ್ದಾರಿಯನ್ನು ಅರಿತು ನಗರದ ಸ್ವಚ್ಛತೆಗೆ ಅಮೂಲ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರಸಭೆ ವತಿಯಿಂದ ನಗರದ ಅಜ್ಜರಕಾಡುವಿನ ಪುರಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪೌರಕಾರ್ಮಿಕರು ಉಡುಪಿಯ ಆಸ್ತಿ. ತಮ್ಮ ವೃತ್ತಿಗೆ ನ್ಯಾಯ ಕೊಡಿಸುವ ಮೂಲಕ ಜಿಲ್ಲೆಯ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಉಡುಪಿ ನಗರಸಭೆಯು ಇತರೆ ಸ್ಥಳೀಯಾಡಳಿತ […]
ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಉಡುಪಿಯ ಮೂಡನಿಡಂಬೂರು ಗ್ರಾಮದ ಸರಸ್ವತಿ ಶಾಲೆಯ ಬಳಿ ನವೆಂಬರ್ 23 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿರುತ್ತದೆ. 5 ಅಡಿ 8 ಇಂಚು ಎತ್ತರ, ಸಾಧರಾಣ ಶರೀರ, ದುಂಡು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿರುವ ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಪಿ.ಎಸ್.ಐ ಉಡುಪಿ ನಗರ ಪೊಲೀಸ್ ಠಾಣೆ ಮೊ.ನಂ: 9480805445, ಪಿ.ಐ ಉಡುಪಿ ನಗರ ಪೊಲೀಸ್ […]
ವಿಕಲಚೇತನರ ಸಪ್ತಾಹ ಉದ್ಘಾಟನೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಿಕಲಚೇತನರ ಗ್ರಾಮೀಣ ಹಾಗೂ ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ ನಗರದ ಬನ್ನಂಜೆ […]