ಬೆಳ್ತಂಗಡಿ: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು.

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಋಷ್ವಿ (17) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನ.30ರಂದು ಉಡುಪಿಯಲ್ಲಿ ‘ತುಳು ಮಿನದನ-2024 ಕಾರ್ಯಕ್ರಮ’

ಉಡುಪಿ: ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮವನ್ನು ಇದೇ ನ.30ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರ್ಯಕ್ರಮವನ್ನು […]

ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ.

ಮಣಿಪಾಲ, ನ.25: ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ಐದು ದಿನ ಬಾಕಿ ಇದ್ದು ನ. 30ಕ್ಕೆ ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ […]

ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ಉಡುಪಿ: ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರಿಗೆ ಕರ್ನಾಟಕದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್’ನ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ.

ಉಡುಪಿ: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದ​ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ರಿಂದ ಸರ್ವಜ್ಞ ಪೀಠದಲ್ಲಿ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾರ್ಕೆಟಿಂಗ್ ಮುಖ್ಯ ವ್ಯವಸ್ಥಾಪಕ ಉಲ್ಲಾಸ ಗುನಗಾ, ರೀಜನಲ್ ವ್ಯವಸ್ಥಾಪಕ ವಿಜಯ್ ದೋತಿಹಾಲ್, ಉಡುಪಿ ಶಾಖೆಯ ಹಿರಿಯ ವ್ಯವಸ್ಥಾಪಕ ರಾಘವೇಂದ್ರ ಉಪಾಧ್ಯ ಉಪಸ್ಥಿತರಿದ್ದರು.