ಬ್ರಹ್ಮಾವರ: ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು.
ಉಡುಪಿ: ಬ್ರಹ್ಮಾವರ ಹನೇಹಳ್ಳಿ ಗ್ರಾಮದ ಬಾರಕೂರು ಸರಕಾರಿ ಆಸ್ಪತ್ರೆ ಸಮೀಪ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನ.24ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬೈಕ್ ಸವಾರ ಹರೀಶ್ ಎಂದು ಗುರುತಿಸಲಾಗಿದೆ. ಮಂದಾರ್ತಿ ಕಡೆಯಿಂದ ಬಾರ್ಕೂರು ಕಡೆಗೆ ಹೋಗುತ್ತಿದ್ದ ಕಾರು, ಮಂದಾರ್ತಿ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ನ.25ರಂದು ಬೆಳಗಿವ ಜಾವಾ ಮೃತಪಟ್ಟರು ಎಂದು […]
ಉಡುಪಿ:ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಗೆ ಸೇರಿದ 8 ಮತ್ತು ಪ್ರವರ್ಗ ಸಿ ಗೆ ಸೇರಿದ 55 ದೇವಸ್ಥಾನಗಳಿಗೆ ಮೂರು ವರ್ಷಗಳಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) […]
ಉಡುಪಿ:ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಉಡುಪಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ/ ಉಪ ಚುನಾವಣೆ ನವೆಂಬರ್ -2024 ರ ಮತ ಎಣಿಕೆ ಕಾರ್ಯವು ನವೆಂಬರ್ 26 ರಂದು ಉಡುಪಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕು ಕಚೇರಿಗಳಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35ರಡಿ ಪ್ರದತ್ತವಾದ […]