ಉಡುಪಿ:ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ – ಹೊಸ ಸೇತುವೆಯಲ್ಲಿ ಸಂಚರಿಸಲು ಅವಕಾಶ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2) & (5) ಅನ್ವಯ, ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು […]

ಉಡುಪಿ:ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಹಾಗೂ ಲಿಯೋ ಡಿಸ್ಟಿçಕ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ […]

ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ / ಉಪ ಚುನಾವಣೆ ಡಿಸೆಂಬರ್ -2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಉಪ ಚುನಾವಣೆ ನಡೆಸುವ ಸಂಬಂಧ ಡಿಸೆಂಬರ್ 8 ರಂದು ಮತದಾನ ದಿನವನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ (10)ಬಿ ರ ಪ್ರಕಾರ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ […]

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ

ಉಡುಪಿ : ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆ ಸಹಿತಾ ವಿವಿಧ ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಕಳೆದ ಹಲವು […]

ಕಾರ್ಕಳ: ದುರ್ಗಾ ಫಾಲ್ಸ್‌ಗೆ ಈಜಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ನೀರುಪಾಲು

ಉಡುಪಿ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಈಜುಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಆಘಾತಕಾರಿ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. […]