ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಗೆ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾದವರರಿಗೆ 1500 ರೂ. ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ […]

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು.

ಹೆಬ್ರಿ: ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಬುಧವಾರ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಬ್ಬಿನಾಲೆ ಹೊನ್ನ ಕೊಪ್ಪಲದಲ್ಲಿ ನಡೆದಿದೆ. ಕೃಷಿ ಚಟುವಟಿಕೆಗೆ ಸಂಬಂಧಿಸಿ ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಧ್ಯಾಹ್ನ ಹೊತ್ತು ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು. ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ […]

ಬೆಳ್ತಂಗಡಿ: ಈಜಲು ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು.

ಬೆಳ್ತಂಗಡಿ: ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂದು ಗುರುತಿಸಲಾಗಿದೆ. ವೇಣೂರು ಚರ್ಚ್‌ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರು ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು, ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು, ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ […]

ಮಲ್ಪೆ: ಯುವಕ ನಾಪತ್ತೆ

ಉಡುಪಿ: ಮಲ್ಪೆಯ ಬೋಟ್‌ನಲ್ಲಿ ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ(20) ಎಂಬವರು ನ.23ರಂದು ಸಂಜೆ ಊರಿಗೆ ಹೋಗುವುವುದಾಗಿ ಹೇಳಿ ಮಲ್ಪೆಯ ಬಾಡಿಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.