ಲೋಕ್ ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಕ್ಕೆ ಅವಕಾಶ
ಉಡುಪಿ: ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜ್ಯ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥ್ಯವಾಗುವ ಪ್ರಕರಣಗಳನ್ನು ಲೋಕ್ ಅದಾಲತ್‌ಗೆ ಗುರುತಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು. ಆದ್ದರಿಂದ ಜಿಲ್ಲೆಯ ಗ್ರಾಹಕರು, ವಕೀಲರು ಹಾಗೂ ಸಾರ್ವಜನಿಕರು ಸದರಿ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗದ ಸಹಾಯಕ ಆಡಳಿತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬಜೆಟ್ ತಯಾರಿ: ಪೂರ್ವಭಾವಿ ಸಮಾಲೋಚನಾ ಸಭೆ
ಉಡುಪಿ: ಕರ್ನಾಟಕ ಪುರಸಭಾ ಲೆಕ್ಕಪತ್ರ ಮತ್ತು ಬಜೆಟ್ ನಿಯಮ 2006 ರನ್ವಯ ಉಡುಪಿ ನಗರಸಭೆಯ 2025-26 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಮೊದಲನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ನವೆಂಬರ್ 30 ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ, ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸದರಿ ಸಭೆಯಲ್ಲಿ ಭಾಗವಹಿಸಿ, ಸಲಹೆ, ಸೂಚನೆಗಳನ್ನು ನೀಡುವಂತೆ […]
ಡಿ.3: ವಿಶ್ವ ವಿಕಲಚೇತನರ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ […]
ಉಡುಪಿ:ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವ : ಮದ್ಯ ಮಾರಾಟ ನಿಷೇಧ
ಉಡುಪಿ: ನವೆಂಬರ್ 30 ರಂದು ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಪುರ ಮೆರವಣಿಗೆ ಹಾಗೂ ಕಾರ್ಯಕ್ರಮ ನಡೆಯುವ ಹಿನ್ನೆಲೆ, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನವೆಂಬರ್ 30 ರಂದು […]
ಉಡುಪಿ:ಡ್ರೋನ್ ಆಧಾರಿತ ಫೋಟೋಗ್ರಾಫಿ, ವೀಡಿಯೋಗ್ರಾಫಿ ತರಬೇತಿ : ಅರ್ಜಿ ಆಹ್ವಾನ
ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ & ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡದ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.