ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಯು.ಎಸ್.ಶೆಣೈ ಅವರನ್ನು […]
ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸಿ; ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ

ಉಡುಪಿ: ಉಡುಪಿ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನಾಂಗವಾದ ‘ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ ಮಾಡಿದೆ. ಈ ಕುರಿತು ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ್ ಗೌಡ ಈದು ಅವರು, ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸರಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಕೃಷಿ ಭೂಮಿ ರಹಿತರಿಗೆ […]
ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಟಾಟಾನ್ಯಾನೋ ಎಲೆಕ್ಟ್ರಿಕ್ ಕಾರು

ಮುಂಬೈ: ರತನ್ ಟಾಟಾರ ಎಲೆಕ್ಟಿಕ್ ನ್ಯಾನೋ ಕನಸು ಮುಂದಿನ ವರ್ಷ ನನಸಾಗಲಿದೆ. ಬೇಡಿಕೆ ಕುಸಿತದ ಕಾರಣ ಉತ್ಪಾದನೆ ಸ್ಥಗಿತಗೊಂಡಿದ್ದ ನ್ಯಾನೋ ಕಾರನ್ನು ಎಲೆಕ್ಟ್ರಿಕ್ ಮಾದರಿಯಲ್ಲಿ 2025ರ ವೇಳೆಗೆ ಬಿಡುಗಡೆ ಮಾಡಲು ಟಾಟಾ ಸಮೂಹ ಸಜ್ಜಾಗಿದೆ. ಕಾರು 17 ಕಿಲೋವ್ಯಾಟ್ ಬ್ಯಾಟರಿ ಹೊಂದಿರಲಿದ್ದು, ಪೂರ್ತಿ ಚಾರ್ಜ್ ಮಾಡಿದರೆ 400 ಕಿ.ಮೀ. ಸಾಗಬಲ್ಲದು, ಕಾರಿನ ಒಳಭಾಗದಲ್ಲಿ 9 ಇಂಚು ಟಚ್ ಸ್ಟೀನ್ ಟೀವಿ, ಪವರ್ ಕಿಟಕಿ, ಸ್ವಯಂಚಾಲಿತ ಹವಾಮಾನ ನಿಯಂತ್ರಕ ಸೇರಿ ಅತ್ಯಾಧುನಿಕ ಇಂಟೀರಿಯ ಇರಲಿದೆ. ಕಾರನ್ನು 4 ಲಕ್ಷ […]
ಕೆಲಸಕ್ಕೆ ಜನ ಬೇಕಾಗಿದ್ದಾರೆ

ತಿಂಡಿ ತಿನಿಸುಗಳ ಮಾರ್ಕೆಟಿಂಗ್ ಸೇಲ್ಸ್ ನಲ್ಲಿ ಅಭವವುಳ್ಳ, ದ್ವಿಚಕ್ರ ಮತ್ತು ಲೈಟ್ ಗೂಡ್ಸ್ ವಾಹನ ಚಲಾಯಿಸಬಲ್ಲವರು ಬೇಕಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9741761153
ಡಯಾನಾ -ಅಲೆವೂರು ಮುಖ್ಯ ರಸ್ತೆಯ ದುರಸ್ತಿಗೆ ಆಗ್ರಹಿಸಿ ವಿಚಿತ್ರ ಪ್ರತಿಭಟನೆ

ಉಡುಪಿ: ಡಯಾನಾ -ಅಲೆವೂರು ಮುಖ್ಯ ರಸ್ತೆ ಹದಗೆಟ್ಟು ವರ್ಷಗಳೇ ಕಳೆದಿದೆ. ಕುಕ್ಕಿಕಟ್ಟೆಯಲ್ಲಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮನೆ ಮುಂಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಸಂಚರಿಸಲು ಆಗದಷ್ಟು ದುಸ್ಥಿತಿಗೆ ತಲುಪಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ದುರಸ್ತಿಗೊಳಿಸುವ ಭರವಸೆ ನೀಡಿ ವರ್ಷಗಳೇ ಕಳೆದು ಹೋಗಿದ್ದು, ರಸ್ತೆ ಮಾತ್ರ ದುರಸ್ತಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹಿಂದೆ ಸ್ಥಳೀಯರು ರಸ್ತೆ ದುರಸ್ತಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಸ್ಥಳೀಯರು ವಿಭಿನ್ನ ಪ್ರತಿಭಟನೆ ಮೂಲಕ […]