53 ದಿನಗಳ ಈಶಾನ್ಯ ರಾಜ್ಯ ಪ್ರವಾಸ ಮುಗಿಸಿದ ಕಾಪುವಿನ ಯುವಕರಿಗೆ ಮಾರಿಗುಡಿಯಲ್ಲಿ ಅಭಿನಂದನೆ

ಉಡುಪಿ: ಕರಾವಳಿ ಪ್ರವಾಸೋದ್ಯಮ, ಹೊಸ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ನಡೆಸಿ, ಉತ್ತರ ಭಾರತ ಸಹಿತವಾಗಿ ಮೇಘಾಲಯ, ಮಿರಾಂ, ಒಡಿಶಾ ಸಹಿತ 19 ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಮರಳಿದ ಶಟರ್ ಬಾಕ್ಸ್ ಖ್ಯಾತಿಯ ಕಾಪು ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡವನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ […]
ಕೃಷಿ ಸೋಲಾರ್ ಪಂಪ್‌ಸೆಟ್ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ-ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80 ರಷ್ಟು ಸಹಾಯಧನ.

ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್‌ಸೆಟ್ ಯೋಜನೆ 2024(Solar Farm Pumpset Scheme 2024) ರ ಅಡಿಯಲ್ಲಿ, ರೈತರು ತಮ್ಮ ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80 ರಷ್ಟು ಸಹಾಯಧನ(subsidy)ದಲ್ಲಿ ಸೋಲಾರ್ ವಿದ್ಯುತ್ ಘಟಕಗಳನ್ನು ಅಳವಡಿಸಿಕೊಳ್ಳಬಹುದು. ಸಾಂಪ್ರದಾಯಿಕ ಗ್ರಿಡ್ ವಿದ್ಯುತ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ರೈತರಲ್ಲಿ ಸೌರಶಕ್ತಿ ಬಳಕೆಯನ್ನು ಉತ್ತೇಜಿಸಲು, ರಾಜ್ಯ ಸರ್ಕಾರ ಕುಸುಮ್ ಬಿ ಯೋಜನೆ(Kusum b scheme)ಯಡಿ ಸೌರ ಪಂಪ್‌ಸೆಟ್‌ಗಳಿಗೆ ಶೇ.80ರಷ್ಟು ಸಬ್ಸಿಡಿ ನೀಡುತ್ತಿದೆ. […]
ಮುಂಬೈ(ಟೀಂ ಇಂಡಿಯಾ): ವೇಗಿ ಮೊಹಮ್ಮದ್ ಶಮಿಗೆ ಆರೋಗ್ಯದ ದೃಷ್ಟಿಯಿಂದ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ಮುಂಬೈ: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ (Mohammed Shami) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೆ ಒಂದು ವರ್ಷವಾಯಿತು. 2023ರ ಏಕದಿನ ವಿಶ್ವಕಪ್ ನಲ್ಲಿ ಗಾಯಗೊಂಡಿದ್ದ ಶಮಿ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗಷ್ಟೇ ಮತ್ತೆ ವೃತ್ತಿಪರ ಕ್ರಿಕೆಟ್ ಗೆ ಶಮಿ ಮರಳಿದ್ದು, ಭಾರತ ತಂಡವನ್ನು ಕೂಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಅವರ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಇದು ಸದ್ಯ ಕಷ್ಟದ […]
ಪಡುಬಿದ್ರೆ: ಮಹಿಳೆ ನಾಪತ್ತೆ

ಉಡುಪಿ: ಪಡುಬಿದ್ರೆ ಎರ್ಮಾಳು ಗ್ರಾಮದ ಅಬ್ದುಲ್ ಅಝೀಝ್ ಎಂಬವರ ಪತ್ನಿ ಆಯಿಷಾ (33) ಎಂಬವರು ನ.26ರಂದು ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಝೀಝ್ ತನ್ನ ಹೆಂಡತಿ ಹಾಗೂ ಮಗನೊಂದಿಗೆ ದುಬೈನಲ್ಲಿ ವಾಸವಾಗಿದ್ದು ಇತ್ತೀಚೆಗೆ 5 ತಿಂಗಳ ಹಿಂದೆ ತನ್ನ ಹೆಂಡತಿ ಹಾಗೂ ಮಗನೊಂದಿಗೆ ಊರಿಗೆ ಬಂದಿದ್ದರು. ಬಳಿಕ ಹೆಂಡತಿ ಹಾಗೂ ಮಗನನ್ನು ಊರಿನಲ್ಲಿ ಬಿಟ್ಟು ದುಬೈಗೆ ಹೋಗಿದ್ದ ಅಝೀಝ್ ಇತ್ತೀಚೆಗೆ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಇವರು ತನ್ನ ತಾಯಿಯನ್ನು […]
ಬ್ರಹ್ಮಾವರ: ಯುವಕ ನಾಪತ್ತೆ.

ಬ್ರಹ್ಮಾವರ: ಹೂವಿನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬ್ರಹ್ಮಾವರದ ದಿನೇಶ್(38) ಎಂಬವರು ನ.25ರಂದು ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.