ಉಡುಪಿ: ಡಿ.2-5 ರ ವರೆಗೆ ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮ
ಉಡುಪಿ: ಭಂಡಾರ್‌ಕರ‍್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಹಾಗೂ ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಿಸೆಂಬರ್ 2 ರಿಂದ 5 ರ ವರೆಗೆ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಬೃಹತ್ ವಿಜ್ಞಾನ, ವಾಣಿಜ್ಯ, ಕಲೆ, ಪರಿಸರ, ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಕುಂದಾಪುರದ ಭಂಡಾರ್‌ಕರ‍್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಡಿಸೆಂಬರ್ 2 ರಂದು ಪುರಮೆರವಣಿಗೆಯನ್ನು ಕುಂದಾಪುರ ತಹಶೀಲ್ದಾರ್ ಶೋಭಾ ಲಕ್ಷ್ಮೀ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನ್ ದಾಸ್ […]
ಉಡುಪಿ:ತ್ರೈಮಾಸಿಕ ಅಂಚೆ ಅದಾಲತ್
ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 6 ರಂದು ಮಧ್ಯಾಹ್ನ 3.30 ಕ್ಕೆ ತ್ರೈಮಾಸಿಕ ಅಂಚೆ ಅದಾಲತ್ ಅನ್ನು ನಿಗಧಿಪಡಿಸಲಾಗಿದೆ. ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿಸೆಂಬರ್ 3 ರ ಮೊದಲು ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದು ಮತ್ತು ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ವಿಶ್ವ ಏಡ್ಸ್ ದಿನ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿದ್ಯಾರತ್ನ ಸ್ಕೂಲ್ & ಕಾಲೇಜು ಆಫ್ ನರ್ಸಿಂಗ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ […]
ಉಡುಪಿ:ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರಿಗೆ ಸನ್ಮಾನ
ಉಡುಪಿ: ಗೋವಾದ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಗೋವಾದ ಮಡಗಾಂವಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ, ಜಾನಪದ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಜಾನಪದ ವಿದ್ವಾಂಸ, ಚಿಂತಕ ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಅವರನ್ನು ಸನ್ಮಾನಿಸಲಾಯಿತು. ಗೋವಾ ಕೊಂಕಣ ರೈಲ್ವೆ ಅಭಿಮಾನ ಬಳಗ ಕೊಂಕಣ ರೈಲ್ವೆ ಕಮರ್ಷಿಯಲ್ ಸೂಪರ್‌ವೈಸರ್ ನಾಗಪತಿ ಹೆಗ್ಡೆ ಮತ್ತು ಬಳಗದ ಅಧ್ಯಕ್ಷ ಸುಭಾಶ್ವಂದ್ರ ಬಿ. ಶೆಟ್ಟಿ ಸನ್ಮಾನಿಸಿದರು. ಬಳಗದ […]
ಉಡುಪಿ:ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ […]