ಆದ್ಯತೆ ಮೇರೆಗೆ ಜನ ಸಾಮಾನ್ಯರ ಕೆಲಸಕಾರ್ಯಗಳನ್ನು ಮಾಡಿಕೊಡಿ
ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು […]
ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ವೀಡಿಯೋ ಶೇರ್ ಮಾಡಿಕೊಂಡು ವಂಡ್ಸೆ ಗ್ರಾಮ ಪಂಚಾಯತ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಸಿಎಂ, ಬಿಬಿಎಂಪಿ ಕಮೀಷನರ್‌ಗೆ ಟ್ಯಾಗ್ ಮಾಡಿ ವೀಡಿಯೋ ಶೇರ್ ಮಾಡಿದ್ದಾರೆ. ಮಹಾನಗರದ ವಾರ್ಡ್‌ಗಳಿಗೆ ವಂಡ್ಸೆ ಗ್ರಾಮ ಮಾದರಿಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾ ಮನವಿ ಮಾಡಿದ್ದಾರೆ.ವಂಡ್ಸೆ ಗ್ರಾಪಂ ತ್ಯಾಜ್ಯ ಮುಕ್ತ ಗ್ರಾಮ […]
ಬೆಂಗಳೂರು: ಬದಲಾಗುತ್ತಿದೆ ಊಟದ ಟ್ರೆಂಡ್ ; ಚೈನೀಸ್, ಉ. ಭಾರತದ ಅಡುಗೆಗೆ ಬಾರಿ ಡಿಮ್ಯಾಂಡ್ ; ಕಾಶ್ಮೀರಿ ಪಲಾವ್, ಫ್ಲೋಟಿಂಗ್ ಇಡ್ಲಿಗೆ ಬೇಡಿಕೆ
ಬೆಂಗಳೂರು: ವಿವಾಹ ಭೋಜನವಿದು… ವಿಚಿತ್ರ ಭಕ್ಷ್ಯಗಳಿವು… ಬೀಗರಿಗೆ ಔತಣವಿದು… ಮಾಯಾ ಬಜಾರ್ ಸಿನಿಮಾದ ಈ ಹಾಡು ಯಾರಿಗೆ ನೆನಪಿಲ್ಲ. ಮದುವೆ ಇತ್ಯಾದಿ ಶುಭ ಸಮಾರಂಭಗಳು ಅದ್ಧೂರಿಯಾದಂತೆ ಊಟ-ತಿಂಡಿಯೂ ನಾವೀನ್ಯತೆ ಪಡೆದುಕೊಳ್ಳುತ್ತಿದೆ. ಒಂದು ಕಾಲದಲ್ಲಿ ಮನೆಯಲ್ಲೇ ಮದುವೆ ಮಾಡುವ ಪರಿಪಾಠವಿತ್ತು. ಮನೆಯವರು, ಊರಿನ ನೆರೆಹೊರೆಯವರೇ ಬಾಣಿಸಿಗರಾಗಿ ಅಲ್ಲೇ ಸಿಗುವ ಪದಾರ್ಥಗಳನ್ನು ಬಳಸಿ ವಿಶೇಷವಾದ ಅಡುಗೆ ಮಾಡಿ ಸಂಭ್ರಮಿಸುವ ಕಾಲವದು. ಆದರೆ ಇದೀಗ ಕಾಲಕ್ಕೆ ತಕ್ಕಂತೆ ಮದುವೆ ಮಹೋತ್ಸವದ ಊಟೋಪಚಾರಗಳೂ ಬದಲಾಗಿವೆ. ಮದುವೆ ಕೇಟರಿಂಗ್ ದೊಡ್ಡಮಟ್ಟ ದಲ್ಲಿ ಬೆಳೆಯುತ್ತಿದೆ. ಅಭಿರುಚಿಗೆ […]
ನಕ್ಸಲರನ್ನು ಬೇರು ಸಮೇತ ಕಿತ್ತು ಹಾಕಬೇಕು ಎನ್ನುವುದು ರಾಜ್ಯ ಸರ್ಕಾರ ನಿಲುವು
ಉಡುಪಿ: ನಕ್ಸಲ್ ಚಟುವಟಿಕೆಗಳನ್ನು ಬೇರು ಸಮೇತ ಕಿತ್ತು ಹಾಕಬೇಕು ಎನ್ನುವುದು ರಾಜ್ಯ ಸರ್ಕಾರ ನಿಲುವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ವಿಕ್ರಂ ಗೌಡ ಎನ್ ಕೌಂಟರ್ ಪ್ರಕರಣದ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸರು ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಕೂಂಬಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ . ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಒಂದು ಬಾರಿ […]
ಕಾಪು:ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು
ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಅಮಾನತು ಮಾಡಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್ ಖಾದರ್ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಗೊಳಿಸಲಾಗಿದೆ.