ಫೆಂಗಲ್ ಚಂಡಮಾರುತದ ಪರಿಣಾಮ ಪರಿಸ್ಥಿತಿ ಆತಂಕಕಾರಿ; ಕೊಚ್ಚಿ ಹೋದ ಬಸ್ ಗಳು

ಚೆನ್ನೈ: ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿ ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ಭಾರೀ ಮಳೆ ಮತ್ತು ಪ್ರವಾಹವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳ ಮೇಲೆ ದೊಡ್ಡ ಮಟ್ಟದಪರಿಣಾಮ ಬೀರಿದ್ದು, ವ್ಯಾಪಕ ಹಾನಿಯಲ್ಲಿ ಕನಿಷ್ಠ 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದ್ದು, ಪ್ರವಾಹದ ನೀರಿನಿಂದ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಕೃಷ್ಣಗಿರಿಯಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದ್ದು ವಿಶೇಷವಾಗಿ ಉತ್ತಂಗಿರಿ ಬಸ್ ನಿಲ್ದಾಣದಲ್ಲಿ ಹಲವಾರು ವಾಹನಗಳು […]

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ.

ಕಾರ್ಕಳ, ಡಿ.02: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02 ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾ‌ರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕು ಮತ್ತು ಸ್ವಾವಲಂಬಿಗಳಾಗಿ ದುಡಿಯಬೇಕು ಎನ್ನುವ ನಿಟ್ಟಿನಲ್ಲಿ ಸರಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದೆ. ಅರ್ಜಿ ಸಲ್ಲಿಸಿದ 35 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು. ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ […]

ಫೆಂಗಲ್ ಚಂಡ ಮಾರುತ: ನಾಳೆ (ಡಿ.3) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ 3-12-2024 ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಹಲವು ಪ್ರದೇಶದ ತಗ್ಗು ಪ್ರದೇಶಗಳು ಮುಳುಗಿದ್ದು ಕೃತಕ […]

ಉಡುಪಿ:ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಂಭ್ರಮದ ದೀಪೋತ್ಸವ ಆಚರಣೆ

ಉಡುಪಿ:ಉಡುಪಿ ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಡಿಸೆಂಬರ್ ಒಂದರ ಭಾನುವಾರ ಕಾರ್ತಿಕ ಅಮಾವಾಸ್ಯೆಯ ಪರ್ವಕಾಲದಂದು ದೀಪೋತ್ಸವ ಮಹೋತ್ಸವ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರಿತು. ಆ ಪ್ರಯುಕ್ತ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು..ಸಾಯಂಕಾಲ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ವಿಶೇಷ ಅಲಂಕೃತ ದೀಪಸ್ತಂಭದಲ್ಲಿ ಶ್ರೀ ಗುರೂಜಿಯವರು ದೀಪ ಪ್ರಜ್ವಲಿಸಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ಕ್ಷೇತ್ರದ ಒಳಾಂಗಣ ಹಾಗೂ ಹೊರಾಂಗಣ ವನ್ನು […]

ಫೆಂಗಲ್ ಚಂಡಮಾರುತ: ಡಿ.3ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಫೆಂಗಲ್‌ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (1-12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ಡಿ.3ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.