ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಆದಷ್ಟು ಬೇಗ ಬಂಧ ಮುಕ್ತಗೊಳಿಸಿ – ಪೇಜಾವರ ಶ್ರೀ ಒತ್ತಾಯ
ಉಡುಪಿ: ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು, ಆದಷ್ಟು ಬೇಗ ಅವರನ್ನು ಬಂಧ ಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ರಾಜದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ. ಅವರ ಎಲ್ಲ ಸೌಲಭ್ಯಗಳನ್ನು ನಿಷೇಧಿಸಲಾಗಿದೆ. ಇದು ಅತ್ಯಂತ ಕಠೋರವಾದ ವಿಚಾರ, ಇದನ್ನು ಖಂಡಿಸುತ್ತೇವೆ. ಬಹುಬೇಗ ಅವರನ್ನು ವಿಮುಕ್ತಗೊಳಿಸಬೇಕು. ಬಾಂಗ್ಲಾದೇಶಕ್ಕೆ ಅವರು ಮತ್ತು ಇಸ್ಕಾನ್ ಸಲ್ಲಿಸಿರುವ ಕೊಡುಗೆ ಅತ್ಯಪೂರ್ವ. ಹಸಿದವರಿಗೆ ಕಷ್ಟಕಾಲದಲ್ಲಿ ಅನ್ನ ಕೊಟ್ಟ ಸಂಸ್ಥೆ ಇಸ್ಕಾನ್. […]
ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ಆಡಿಯೇ ಇಲ್ಲ: ಪೇಜಾವರ ಶ್ರೀ
ಉಡುಪಿ: ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.ಸಂವಿಧಾನ ಕುರಿತು ಪೇಜಾವರ ಶ್ರೀಗಳು ನೀಡಿದ್ದಾರೆ ಎನ್ನಲಾದ ಹೇಳಿಕೆ ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು. ಈ ಕುರಿತು ಮೌನ ಮುರಿದ ಶ್ರೀಗಳು ಉಡುಪಿಯಲ್ಲಿ ಸ್ಪಷ್ಟನೆ ನೀಡಿದರು. ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಸಂತರು ಸೇರಿ ಲಿಖಿತ ರೂಪದ ನಿರ್ಣಯ ಕೈಗೊಂಡಿದ್ದೆವು. ರಾಜ್ಯಪಾಲರಿಗೆ ಕೊಟ್ಟ ಪ್ರತಿಯಲ್ಲಿ ಸಂವಿಧಾನ ಕುರಿತ ಯಾವುದೇ ಮಾತು […]
ಉಡುಪಿ: ಹಿರೋ ಮೋಟೋ ಕಾರ್ಪ್ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಉಡುಪಿ: ಉಡುಪಿಯ ಹೀರೋ ಮೋಟೋ ಕಾರ್ಪ್ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ತೆರೆದ ಹುದ್ದೆಗಳು: ◼ ಮ್ಯಾನೇಜರ್ ◼ ಫ್ರಂಟ್ ಲೈನ್ ಸೂಪರ್ವೈಸರ್ ◼ಐಟಿಐ ಅಂಡ್ ಪಿಡಿಐ ಮ್ಯಾನೇಜರ್ ◼ ಡ್ರೈವರ್ ವಿಥ್ ಬ್ಯಾಚ್ ಶಕ್ತಿ ಮೋಟರ್ಸ್ ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ತಂಡಕ್ಕೆ ಸೇರಲು ಪ್ರತಿಭಾವಂತ ವ್ಯಕ್ತಿಗಳಿಗೆ ಮೊದಲ ಅವಕಾಶವಿರುತ್ತದೆ.ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ ಇಮೇಲ್ ಮೂಲಕ ಕಳುಹಿಸಬಹುದು. [email protected]ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9590983687 7996855666
ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ.
ಮಣಿಪಾಲ: ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕಂಚಿನಬೈಲಿನ ಸುರೇಶ್ ಎಂದು ಗುರುತಿಸಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ ಹೋಗಿದ್ದು, ನಂತರ ನಾಪತ್ತೆಯಾಗಿದ್ದ ಸುರೇಶ್‌ಗೆಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮೊಬೈಲ್ ವಾಟ್ಸಾಪ್ ನಂಬರಿಗೆ ಲಿಂಕ್ ಕಳಿಸಿ, ಲಕ್ಷಾಂತರ ರೂ. ವಂಚನೆ.
ಉಡುಪಿ: ವ್ಯಕ್ತಿಯೊಬ್ಬರು ಮೊಬೈಲ್ ವಾಟ್ಸಾಪ್ ನಂಬರಿಗೆ ಬಂದ ಲಿಂಕ್ ಅನ್ನು ಒತ್ತಿದ ಪರಿಣಾಮ ಲಕ್ಷಾಂತರ ರೂ. ಹಣ ಕಳೆದುಕೊಂಡು ಮೋಸ ಹೋದ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ನಿವಾಸಿ ಕೆ.ಜಯರಾಮ ಕೆ.,ಎಂಬವರ ವಾಟ್ಸಾಪ್ ನಂಬರಿಗೆ ನ.28ರಂದು ಎಪಿಕೆ ಪೈಲ್ ಬಂದಿದ್ದು ಅದನ್ನು ಒತ್ತಿದ ತತ್‌ಕ್ಷಣ ಅವರ ಯೂನಿಯನ್ ಬ್ಯಾಂಕ್ ಖಾತೆಯಿಂದ 3.38, 800 ರೂ. ಅನ್ಯ ಖಾತೆಗೆ ವರ್ಗಾವಣೆಯಾಗಿದೆ. ರಾತ್ರಿ 8 ಗಂಟೆಗೆ ಹಣ ಕಡಿತಗೊಂಡ ಬಗ್ಗೆ ಮೇಸೆಜ್ ಬಂದಿರುತ್ತದೆ.ವಂಚನೆ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ […]