ಉಡುಪಿ:ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ(ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ […]
ಉಡುಪಿ:ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ […]
ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನಾ ಜಾಥಾ
ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿ ಜೋಡುಕಟ್ಟೆಯಲ್ಲಿ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಅಲ್ಲಿಂದ ಆರಂಭಗೊಂಡ ಜಾಥವು ಸರ್ವಿಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಸಾಗಿಬಂದು ಶ್ರೀ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಸಮಾಪ್ತಿಗೊಂಡಿತು. ಜಾಥಾದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ […]
ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಷಷ್ಟಿ ಮಹೋತ್ಸವ ಆಚರಣೆ
ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಲ್ಲಿ ದೇವಯಾನಿ ಸಹಿತ ಷಟ್ ಶಿರ ಸುಬ್ರಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ತಾರೀಕು 8ರ ಭಾನುವಾರ ಚಂಪಾಷಷ್ಟಿಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಆ ಪ್ರಯುಕ್ತ ಪಂಚವೀಂಷತಿ ಕಲಶಾರಾಧನೆ, ಪವಮಾನ ಕಲಶಾ ಅಭಿಷೇಕ ಶ್ರೀ ಸುಬ್ರಮಣ್ಯ ಸಹಸ್ರನಾಮ ಪಾಯಸ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಬ್ರಾಹ್ಮಣರಾಧನೆ, ಪ್ರಸನ್ನ ಪೂಜೆ ಅನ್ನ ಸಂತರ್ಪಣೆ ನೆರವೇರಲಿದೆ […]
ಸಮಾಜದಲ್ಲಿ ನ್ಯಾಯ ನೆಲೆಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲಿದೆ
ಉಡುಪಿ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರು ಬಹಳ ಮಹತ್ವದ ಪಾತ್ರ ವಹಿಸಿದ್ದರು. ಯುವ ವಕೀಲರು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸಮಾಜದಲ್ಲಿ ನ್ಯಾಯ ನೆಲೆಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲೆ ಇದೆ ಎಂದು ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಹೇಳಿದರು. ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹೈಕೋರ್ಟಿನ 2025ನೇ ಸಾಲಿನ ಕ್ಯಾಲೆಂಡರನ್ನು ಹೋಲುವ ಸಂಘದಿಂದ ಹೊರತಂದಿರುವ ನೂತನ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ನ್ಯಾಯಾಲಯ […]