ಮಂಗಳೂರು: ಬಾಲಕಿ ನಾಪತ್ತೆ.

ಮಂಗಳೂರು: ಮೂಡುಶೆಡ್ಡೆ ಪಂಜುರ್ಲಿ ಕಟ್ಟೆ ಹತ್ತಿರದ ಜಾರದ ಬೆಟ್ಟು ಮನೆ ನಿವಾಸಿ ಕ್ರಿಸ್ಟಲ್ ಕ್ಲೆಮೆಟೀನಾ ಡಿಸೋಜ (14) ಎಂಬಾಕೆ ನ.17ರಿಂದ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 4.5 ಅಡಿ ಎತ್ತರದ, ಎಣ್ಣೆ ಕಪ್ಪು ಮೈಬಣ್ಣದ, ಬಿಳಿ ಬಣ್ಣದ, ಗುಲಾಬಿ ಹೂಗಳಿರುವ ಟಾಪ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುವ ಈಕೆ ಕನ್ನಡ, ತುಳು ಮಾತನಾಡುತ್ತಾಳೆ. ಈ ಬಾಲಕಿಯ ಗುರುತು ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ನಿಧನ.

ಉಡುಪಿ: ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಡಿ.1ರಂದು ನಿಧನರಾದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ ಹೊಸ ರಾಗಗಳನ್ನು ಅನ್ವೇಷಿಸುತ್ತಾ ಸಂಗೀತಕ್ಕಾಗಿಯೇ ತಮ್ಮನ್ನು ಸಮರ್ಪಿಸಿ ಕೊಂಡಿದ್ದರು. ಹೊಸ್ತೋಟ ಮಂಜುನಾಥ ಭಾಗವತರೂ ಸೇರಿದಂತೆ ಆ ಕಾಲದ ಹಿರಿಯ ಕಲಾವಿದರೊಂದಿಗೆ […]