ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ವೃದ್ಧ ಗಂಭೀರ, ಹಲವು ವಾಹನ ಜಖಂ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ಇಂದು ಸಂಜೆ ನಡೆದಿದೆ. ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ವೃದ್ದರೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನೋಂದಣಿಯ ಸ್ವಿಫ್ಟ್ ಕಾರು ಪಲ್ಟಿಯಾಗಿದ್ದು, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅತೀ ವೇಗದಲ್ಲಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ […]
ಉಡುಪಿ: ನೀರಿನ ಬಳಕೆಯ ಪರಿಷ್ಕೃತ ದರ ಜಾರಿ
ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ, ಡಿಸೆಂಬರ್ 1 ರಿಂದ ಅನ್ವಯವಾಗುವಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಬಳಕೆ ಶುಲ್ಕವನ್ನು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ. ಗೃಹ ಬಳಕೆಗೆ 8 ಸಾವಿರ ಲೀ. ವರೆಗೆ 9 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 12 ರೂ., 15 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 15 ರೂ. ಹಾಗೂ 25,000 ಲೀ. ಗಿಂತ ಅಧಿಕ ಬಳಕೆಯಾದಲ್ಲಿ 25 ರೂ. ವಿಧಿಸಲಾಗುವುದು. ಗೃಹೇತರ ಬಳಕೆಗೆ 8 ಸಾವಿರ ಲೀ. […]
ಕನ್ನಡ ಭಾ಼ಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ: ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಇವರ ವತಿಯಿಂದ ಡಿಸೆಂಬರ್ 7 ಮತ್ತು 8 ರಂದು ನಡೆಸಲಾಗುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ -150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ನಿಗಧಿಪಡಿಸಲಾಗಿರುವ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ […]
ಉಡುಪಿ: ಡಿ. 9 ರಂದು ಅಂಚೆ ಪಿಂಚಣಿ ಅದಾಲತ್
ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 9 ರಂದು ಸಂಜೆ 4 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ಅನ್ನು ನಿಗಧಿಪಡಿಸಲಾಗಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಡಿಸೆಂಬರ್ 6 ರ ಒಳಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜಿಸಿ: ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್
ಉಡುಪಿ: ವಿದ್ಯಾರ್ಥಿಗಳು ಸಮುದಾಯ ಸೇವಾ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಹೇಳಿದರು. ಅವರು ಇಂದು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು […]