ಉಡುಪಿ:ಡಿ.10 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ […]

ಉಡುಪಿ:ಜಿಲ್ಲೆಯನ್ನು ಕ್ಷಯಮುಕ್ತವಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯನ್ನು ಕ್ಷಯಮುಕ್ತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ನೂರು ದಿನಗಳ ಕ್ಷಯರೋಗ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕ್ಷಯಮುಕ್ತ ವಾತಾವರಣ ನಿರ್ಮಿಸಲು ಹಾಗೂ ಕ್ಷಯರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ […]

ಉಡುಪಿ:ಸೂರ್ಯ ಘರ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, […]

ಉಡುಪಿಯ ನಾಗ ದೇವಸ್ಥಾನಗಳಲ್ಲಿ ಚಂಪಾ ಷಷ್ಠಿ ಸಂಭ್ರಮ

ಉಡುಪಿ: ಉಡುಪಿಯ ನಾಗದೇವರ ಸನ್ನಿಧಾನಗಳಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ ಸಂಭ್ರಮದಿಂದ ಆಚರಿಸಲಾಯಿತು. ಕರಾವಳಿಯ ನಾಗಾಲಯಗಳಲ್ಲಿ ಇಂದು ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತವೆ. ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಹೊಂದಿಕೊಂಡು ನಾಲ್ಕು ನಾಗಾಲಯಗಳಿವೆ. ಈ ಪೈಕಿ ಅತ್ಯಂತ ಪುರಾತನವಾದ ತಾಂಗೋಡು ದೇಗುಲದಲ್ಲಿ ಸಾವಿರಾರು ಜನ ಪೂಜೆ ಸಲ್ಲಿಸಿದರು. ಸುಬ್ರಹ್ಮಣ್ಯನ ಆರಾಧನೆಗೆ ಕರಾವಳಿಯಲ್ಲಿ ವಿಶೇಷ ಮಹತ್ವ ಇದೆ. ಸನ್ನಿಧಾನದಲ್ಲಿ ವಿಶೇಷ ಅನ್ನ ಸಂತರ್ಪಣೆಯನ್ನು ನಡೆಸಲಾಗುತ್ತದೆ. ತಾಂಗೋಡು ಮಾತ್ರವಲ್ಲದೆ ಮಾಂಗೋಡು, ಅರಿತೋಡು, ಮುಚ್ಲಗೋಡು ದೇವಸ್ಥಾನಗಳಲ್ಲೂ ಸುಬ್ರಮಣ್ಯ ಷಷ್ಟಿ ಆಚರಿಸಲಾಯಿತು. ದೇವರ ಆರಾಧನೆಯ […]

ಇನ್ನು ಆಧಾರ್ ಕಾರ್ಡಿನಂತೆಯೇ ಬರಲಿದೆ “ಅಪಾರ್ ಕಾರ್ಡ್!ಏನಿದು?

ಎಲ್ಲರೂ ಆಧಾರ್ ಕಾರ್ಡ್ ಕೇಳಿರುತ್ತೇವೆ, ಹೊಂದಿರುತ್ತೇವೆ. ಆದರೆ ಇದ್ಯಾವ್ದು ಹೊಸ ಅಪಾರ್ (APAAR) ಅನ್ನೋದ್ರ ಬಗ್ಗೆ ನೀವು ಯೋಚ್ನೆ ಮಾಡ್ತಿದ್ರೆ ಅದ್ರ ಬಗ್ಗೆ ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ. ಆಟೋಮೇಟೆಡ್‌ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಇದು ವಿದ್ಯಾರ್ಥಿಗಳಿಗೆ ನೀಡುವಂತಹಾ ಕಾರ್ಡ್ ಆಗಿದ್ದು, ಇಡೀ ದೇಶದ ವಿದ್ಯಾರ್ಥಿಗಳಿಗೆ 12 ವಿಭಿನ್ನ ಸಂಖ್ಯೆಯ ಕಾರ್ಡ್ ನೀಡಲಾಗತ್ತೆ. ಈ ಕಾರ್ಡ್ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಒಳಗೊಂಡಿರುತ್ತದೆ. ವಿದ್ಯಾರ್ಥಿಯ ಆರಂಭಿಕ ಶಿಕ್ಷಣ ಪ್ರಾರಂಭಗೊಂಡ ಶಾಲೆಯ ವಿವರದಿಂದ ಹಿಡಿದು, ವಿದ್ಯಾರ್ಥಿಯ ಸಾಧನೆ, […]