ಉಡುಪಿ ಕೃಷ್ಣಮಠಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಆದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು. ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರನ್ನು ಕಂಡು ಪ್ರಾರ್ಥನೆ ಸಲ್ಲಿಸಿದ ಬಳಿಕ, ಗೀತಾ ಮಂದಿರದಲ್ಲಿ ಕಿರು ಸಮಾರಂಭ ಆಯೋಜಿಸಲಾಯಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸನಾತನ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ನೀಡಿದ ಮಹೋನ್ನತ ಸೇವೆಯನ್ನು ಪರಿಗಣಿಸಿ ‘ಹಿಂದು ಸಾಮ್ರಾಟ್’ ಎಂಬ ಬಿರುದು ಹಾಗೂ […]
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೀವ ವಿಮಾ ಪ್ರತಿನಿಧಿಗಳಿಂದ ಧರಣಿ
ಉಡುಪಿ: ಕನಿಷ್ಠ ವಿಮಾ ಮೊತ್ತ 1 ಲಕ್ಷ ರೂ. ಮರುಜಾರಿ, ವಿಮಾ ಪಾಲಿಸಿ ಖರೀದಿಗೆ ಗರಿಷ್ಠ ವಯೋಮಿತಿ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಫೆಡರೇಶನ್ ಉಡುಪಿ ವಿಭಾಗದ ನೇತೃತ್ವದಲ್ಲಿ ಜೀವ ವಿಮಾ ಪ್ರತಿನಿಧಿಗಳು ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಇಂದು ಧರಣಿ ನಡೆಸಿದರು. ಜೀವ ವಿಮಾ ಪ್ರತಿನಿಧಿಗಳ ಭವಿಷ್ಯದ ದೃಷ್ಟಿಯಿಂದ ಎಲ್‌ಐಸಿಗೆ ಮಾರಕವಾಗಿರುವ ಕೆಲವೊಂದು ಬದಲಾವಣೆಯನ್ನು ಶೀಘ್ರವೇ ನಿಲ್ಲಿಸಬೇಕು. ಹಿಂದಿನ ಕಮಿಷನ್ ದರ ಮರುಜಾರಿಗೊಳಿಸಬೇಕು. ಪ್ರೀಮಿಯಂ ಮೇಲಿನ […]
ಡಿ.13ರಂದು ‘ದಸ್ಕತ್’ ತುಳು ಚಲನಚಿತ್ರ ಕರಾವಳಿಯಾದ್ಯಂತ ಬಿಡುಗಡೆ
ಉಡುಪಿ: ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಇದೇ ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ತೀಕರಣ ಮಾಡಲಾಗಿದೆ ಎಂದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, […]
ಜೈನ ಧರ್ಮಿಯರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದಿಂದ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ.ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಕರ್ನಾಟಕ ಸಮಸ್ತ ಜೈನ ಸಮಾಜದ ವತಿಯಿಂದ ಸೋಮವಾರ ನಡೆದ ಜೈನ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಭಾರತದ ಸಂವಿಧಾನ ತುಂಬಾ ಶ್ರೇಷ್ಠವಾದದ್ದು, ಇಲ್ಲಿ ಆಚಾರ ವಿಚಾರಗಳಿಗೆ ತುಂಬಾ ಸ್ವಾತಂತ್ರ್ಯವಿದೆ. ಅಲ್ಪ ಸಂಖ್ಯಾತ ಕೋಟಾದಲ್ಲಿ ಜೈನ ಧರ್ಮಿಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. […]
ಸುಳ್ಯ: ಕುಸಿದು ಬಿದ್ದು ವ್ಯಕ್ತಿ ಮೃತ್ಯು.
ಮಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಅರಣ್ಯ ತಪಾಸಣ ಚೆಕ್‌ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಕೂಡುಮಜಲು ಮುದಿಯಾರು ಸದಾಶಿವ ಗೌಡ (58) ಮೃತರು. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಶನಿವಾರ ರಾತ್ರಿ ಜಾಲ್ಸೂರಿನ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗೆ ವೇಳೆಗೆ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಅರಣ್ಯ ಇಲಾಖೆಯ ಸಿಬಂದಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸುಳ್ಯದ ಖಾಸಗಿ […]