ಬಂಟ್ವಾಳ: ಜೋಕಾಲಿ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು.
ಬಂಟ್ವಾಳ ಡಿ. 09: ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿ ಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.
ಕುಂದಾಪುರ:ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ದಿವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ.
ಕುಂದಾಪುರ : ಡಿಸೆಂಬರ್ 08 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕಿರಿಮಂಜೇಶ್ವರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನತಾ ಶನಯ ಶಾಲಾ ವಾರ್ಷಿಕೋತ್ಸವ.
ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ಸಂಭ್ರಮದಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭ ಜನತಾ ಶನಯ 2024 ಅದ್ದೂರಿಯಾಗಿ ಎರಡು ದಿನಗಳ ಕಾಲ ಜರುಗಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ಸರ್ವಾಂಗೀಣ ಸಾಧನೆಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಗಣೇಶ ಮೊಗವೀರರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶ್ರೇಷ್ಠವಾದ ಗುಣಮಟ್ಟದ ಶಿಕ್ಷಣವನ್ನು […]
ಬಿಗ್ ಬಾಸ್ ಮನೆಗೆ ಸೀಸನ್10ರ ಸ್ಪರ್ಧಿಗಳಾದ ಡ್ರೋನ್ ಪ್ರತಾಪ್, ತನಿಷಾ ಎಂಟ್ರಿ… ಜೊತೆಯಾದ ಸಂತು -ಪಂತು ಜೋಡಿ
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್ ಆಗಿಲ್ಲ. ಆ ಮೂಲಕ ಡೇಂಜರ್ ಝೋನ್‌ನಲ್ಲಿದ್ದ ಸ್ಪರ್ಧಿಗಳಿಗೆ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳೋಕೆ ಮತ್ತೊಂದು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಚೈತ್ರಾ ಅವರನ್ನು ಕೆಲಕಾಲ ಕನ್ಫೆಷನ್ ರೂಮ್‌ನಲ್ಲಿ ಕೂರಿಸಿ ಆ ಬಳಿಕ ಮನೆಯೊಳಗೆ ಕರೆಸಿಕೊಳ್ಳಲಾಗುತ್ತದೆ. ಎಲಿಮಿನೇಷನ್ ಇಲ್ಲದೆ ಕಳೆದ ವಾರ ಸಾಗಿದೆ.ಈ ವಾರದ ಆರಂಭಿಕ ದಿನದಲ್ಲಿ ಬಿಗ್ ಬಾಸ್ ಮನೆಗೆ ಕಳೆದ ಸೀಸನ್‌ನಲ್ಲಿ ಗಮನ ಸೆಳೆದ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ತನಿಷಾ, ಡ್ರೋನ್ ಪ್ರತಾಪ್, ತುಕಾಲಿ ಸಂತೋಷ್ ಹಾಗೂ […]
ಬ್ರಹ್ಮಾವರದಲ್ಲಿ ಕಿಚನ್ ಹೆಲ್ಪರ್ ಕೆಲಸಕ್ಕೆ ಯುವಕರು ಬೇಕಾಗಿದ್ದಾರೆ
ಬ್ರಹ್ಮಾವರ:ಬ್ರಹ್ಮಾವರದಲ್ಲಿ ತಿಂಡಿ ತಯಾರಿಕಾ ಘಟಕದಲ್ಲಿ ಕಿಚನ್ ಹೆಲ್ಪರ್ ಕೆಲಸಕ್ಕೆ 40ವರ್ಷ ಒಳಗಿನ ಯುವಕರು ಬೇಕಾಗಿದ್ದಾರೆ. ಊಟ ವಸತಿ ಆಕರ್ಷಕ ವೇತನದ ಸೌಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7349038077