ಕಾಪು: ರಸ್ತೆ ಅಪಘಾತದಲ್ಲಿ ಹಿರಿಯ ಟೈಲರ್ ಮೃತ್ಯು

ಉಡುಪಿ: ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಮಂಜಾನೆ ರಾಷ್ಟ್ರೀಯ ಹೆದ್ದಾರಿ ಉದ್ಯಾವರದಲ್ಲಿ ನಡೆದಿದೆ. ಕಾಪು ನಿವಾಸಿ ಬಾಬು ಶೆಟ್ಟಿಗಾರ್ (70) ಮೃತ ವ್ಯಕ್ತಿಯಾಗಿದ್ದಾರೆ. ಬಾಬು ಶೆಟ್ಟಿಗಾರ್ ಅವರು ಟೈಲರಿಂಗ್ (ಬಟ್ಟೆ ಹೊಲಿಯುವ) ಕೆಲಸ ಮಾಡುತ್ತಿದ್ದರು. ಅನಾರೋಗ್ಯದಿಂದಾಗಿ ಬಾಬು ಅವರ ಸಹೋದರ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ಈ ಅಪಘಾತ ನಡೆದಿದೆ. ಉಡುಪಿ – ಮಂಗಳೂರು ರಸ್ತೆಯಲ್ಲಿರುವ ಉದ್ಯಾವರ ಹಲೀಮಾ ಸಾಬ್ಬು ಸಭಾಂಗಣ ಬಳಿಯ ಶೋರೂಂ ಬಳಿ ಈ ಅಪಘಾತ ಸಂಭವಿಸಿದೆ. […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ಉದ್ಯಾವರ ನಿವಾಸಿ ರಂಗನಾಥ ಕಾಮತ್ (49) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2)ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ […]

ದೊಡ್ಡನಗುಡ್ಡೆ: ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ […]

ಬೈಲೂರು ದೇವಾಲಯದಲ್ಲಿ ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ: ಹಸಿರು ಹೊರೆಕಾಣಿಕೆ ಮೆರವಣಿಗೆ

ಉಡುಪಿ: ಬೈಲೂರು ಮಹಿಷಮರ್ಧಿನಿ ದೇವಾಲಯದಲ್ಲಿ ನಡೆಯಲಿರುವ ಶತಚಂಡಿಕಾಯಾಗ ಹಾಗೂ ಬ್ರಹ್ಮಮಂಡಲ ಸೇವೆ ಹಿನ್ನಲೆ ನಗರದಲ್ಲಿ ಅದ್ದೂರಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ನಗರದ ಜೋಡುಕಟ್ಟೆಯಿಂದ ಬೈಲೂರಿನಲ್ಲಿರುವ ಮಹಿಷಮರ್ಧಿನಿ ದೇವಾಲಯದವರೆಗೆ ನಡೆದ ಹೊರೆಕಾಣಿಕೆಯಲ್ಲಿ ಹುಲಿವೇಷ ಕುಣಿತ, ಕಂಬಳದ ಎತ್ತುಗಳು, ಮುದ್ದುಕೃಷ್ಣ ಜೊತೆ ಯುವತಿಯರ ಭಜನಾ ಕುಣಿತ, ರಾಕ್ಷಸ ವೇಷ, ಹನುಮಂತ, ಗೊಂಬೆ ಕುಣಿತ ಹೀಗೆ ವಿವಿಧ ಪ್ಯಾಬ್ಲೋಗಳು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಗಮನಸೆಳೆಯಿತು. ವೈವಿಧ್ಯ ತರಕಾರಿಗಳನ್ನ ಭಕ್ತರು ಹೊರೆಕಾಣಿಕೆ ಮೂಲಕ ದೇವಾಲಯಕ್ಕೆ ಅರ್ಪಿಸಿದ್ರು.